Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಬೋಧಕ ಸಿಬ್ಬಂದಿಗೆ ದೀಪಾವಳಿ ಉಡುಗೊರೆ: ತುಟ್ಟಿ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
vidhana soudha
vidhana soudha

ಬೆಂಗಳೂರು: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿ ಭತ್ಯೆ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೂಲ ವೇತನದ ಶೇಕಡ 55ರಿಂದ ಶೇಕಡ 58ಕ್ಕೆ ಏರಿಸಿ 1ನೇ ಜುಲೈ 2025ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ಈ ಮೂಲಕ ದೀಪಾವಳಿ ಸಂಭ್ರಮದ ವೇಳೆ ಸರಕಾರಿ ನೌಕರರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ.

2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 55 ರಿಂದ ಶೇಕಡ 58ಕ್ಕೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ.

ಈ ಆದೇಶದ ಉದ್ದೇಶಗಳಿಗಾಗಿ ‘ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣೆ ಮಾಡಿರುವ ಹುದ್ದೆಗೆ ಅನ್ವಯವಾಗುವ 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಪಡೆಯುತ್ತಿರುವ ಮೂಲ ವೇತನವಾಗಿದೆ.

ವೇತನ ಎಂದು ಪರಿಗಣಿಸಲ್ಪಡದ ಯಾವುದೇ ಉಪಲಬ್ದಗಳನ್ನು ಮೂಲ ವೇತನಕ್ಕೆ ಸೇರಿಸತಕ್ಕದ್ದಲ್ಲ.ಈ ಆದೇಶದ ಮೇರೆಗೆ ಮಂಜೂರಾಗಿರುವ ತುಟ್ಟಿಭತ್ಯೆಯನ್ನು ಮುಂದಿನ ಆದೇಶದವರೆಗೆ ನಗದಾಗಿ ಪಾವತಿ ಮಾಡುವುದು.

ಯುಜಿಸಿ/ಐಸಿಎಆ‌ರ್/ಎಐಸಿಟಿಇ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೆ ಈ ಆದೇಶಗಳು ಅನ್ವಯಿಸುವುದಿಲ್ಲ. ತುಟ್ಟಿಭತ್ಯೆಯ ಬಾಕಿ ಮೊತ್ತವನ್ನು 2025ರ ಅಕ್ಟೋಬ‌ರ್ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.

ತುಟ್ಟಿಭತ್ಯೆಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸೆ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮೆ ಇರುವ ಭಿನ್ನಾಂಕಗಳನ್ನು ಕಡೆಗಣಿಸತಕ್ಕದ್ದು.

ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.

ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು, ಸರ್ಕಾರಿ/ಅನುದಾನಿತ ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಪೂರ್ಣಕಾಲಿಕ ನೌಕರರಿಗೆ ಈ ಆದೇಶಗಳು ಅನ್ವಯಿಸುತ್ತವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment