Friday, November 22, 2024
Google search engine
Homeತಾಜಾ ಸುದ್ದಿದೇಶದ ಜನರಿಗೆ ಮೋದಿ, ಅಮಿತ್ ಶಾ ಬೇಕಿಲ್ಲ: ರಾಹುಲ್ ಗಾಂಧಿ

ದೇಶದ ಜನರಿಗೆ ಮೋದಿ, ಅಮಿತ್ ಶಾ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಬೇಡ ಎಂಬ ಸ್ಪಷ್ಟ ಸಂದೇಶವನ್ನು ಮತದಾರ ಪ್ರಭುಗಳು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೀಡಿದ್ದಾರೆ. ಸಂವಿಧಾನ ರಕ್ಷಿಸುವ ಕೆಲಸ ಮಾಡಿದ ಜನರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ರಾಹುಲ್ ಗಾಂಧಿ ಹೇಳಿದ್ದಾರೆ.

ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಮೈತ್ರಿಕೂಟ ಸಂವಿಧಾನ ರಕ್ಷಣೆ ಮಾಡಿ ಎಂದು ಮನವಿ ಮಾಡಿದ್ದೆವು. ಅಲ್ಲದೇ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. ಇದನ್ನು ಆಧರಿಸಿ ಮತದಾರರು ಬೆಂಬಲಿಸಿದ್ದಕ್ಕಾಗಿ ಧನ್ಯವಾದಗಳು ಎಂದರು.

ಜನರ ಭಾವನೆಗಳನ್ನು ಬಿಜೆಪಿ ಅರ್ಥ ಮಾಡಿಕೊಳ್ಳದೇ ಅಹಂಕಾರದಿಂದ ಚುನಾವಣೆ ಎದುರಿಸಿದರು. ಆದರೆ ದೇಶದ ಬಡಜನರು ಅದರಲ್ಲೂ ದಲಿತರು, ಆದಿವಾಸಿಗಳು, ಹಿಂದುಳಿದವರು ಬಿಜೆಪಿಯನ್ನು ಸೋಲಿಸಿದ್ದಾರೆ. ಅದರಲ್ಲೂ ಉತ್ತರ ಪ್ರದೇಶದ ಜನರು ದೇಶದ ರಾಜಕೀಯ ಅರ್ಥ ಮಾಡಿಕೊಂಡು ಮತ ಚಲಾಯಿಸಿದ್ದಕ್ಕೆ ಧನ್ಯವಾದಗಳು ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments