Sunday, June 28, 2026
Google search engine
Homeಕಾನೂನುಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿ ಹಾಕಿದ್ದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!

ಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿ ಹಾಕಿದ್ದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ!

ಗಂಡನ ಕೊಂದು ಶೌಚಾಲಯದ ಗುಂಡಿಯಲ್ಲಿ ಮುಚ್ಚಿಹಾಕಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಚಾಮರಾಜನಗರದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ.

ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ರಾಜಶೇಖರ್ ಎಂಬಾತನ ಕೊಲೆ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಗುಂಡಿಮಾಳ ಗ್ರಾಮದ ನಂದಿನಿ ಹಾಗೂ ಈತನ ಪ್ರಿಯಕರ ದಿನಕರ್ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ನಂದಿನಿಯು ದಿನಕರ್ ಎಂಬಾತನ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದಳು. ಹಲವು ಬಾರಿ ನ್ಯಾಯ ಪಂಚಾಯಿತಿ ಮಾಡಿದ್ದರೂ ಸಂಬಂಧ ಮುಂದುವರೆಸಿದ್ದರು. ಗಂಡನ ಕೈಯಲ್ಲಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಾಗ ಇಬ್ಬರೂ ಸೇರಿ ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಮಾಡಿ ಶೌಚಾಲಯದ ಗುಂಡಿಯಲ್ಲಿ ಮುಚ್ಚಿ ಹಾಕಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಟಿ.ಸಿ.ಶ್ರೀಕಾಂತ್, ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆ ನಂದಿನಿ ಹಾಗೂ ದಿನಕರ್​​ಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸಿ.ಬಿ.ಗಿರೀಶ್​ ವಾದ ಮಂಡಿಸಿದ್ದರು.

ನ್ಯಾಯಾಲಯದ ಆದೇಶದ ವಿವರ:

2021ರ ಜೂನ್ 23ರಂದು ರಾಜಶೇಖರ್ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ನಂದಿನಿ ಬಳಿ ಪ್ರಿಯಕರ ದಿನಕರ ಬಂದಿದ್ದ. ಆದರೆ, ಸ್ವಲ್ಪ ಸಮಯದ ನಂತರ ರಾಜಶೇಖರ್ ಮನೆಗೆ ಬಂದಾಗ ಇಬ್ಬರೂ ಜೊತೆಯಲ್ಲಿ ಇರುವುದನ್ನು ನೋಡಿ ಗಲಾಟೆ ನಡೆದಿದೆ.

ಪತ್ನಿ ನಂದಿನಿ ಹಾಗೂ ಪ್ರಿಯಕರ ದಿನಕರ್ ಸೇರಿಕೊಂಡು ರಾಜಶೇಖರ್​ ಕಣ್ಣಿಗೆ ಕಾರದಪುಡಿ ಎರಚಿ, ತಲೆಯ ಭಾಗಕ್ಕೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ಪತಿ ಪ್ರಜ್ಞೆತಪ್ಪಿ ಬಿದ್ದಿದ್ದಾರೆ. ತಕ್ಷಣ ಇಬ್ಬರೂ ಸೇರಿ ಮನೆಯ ಹಿಂಭಾಗದಲ್ಲಿರುವ ಟಾಯ್ಲೆಟ್ ಗುಂಡಿಯಲ್ಲಿ ತಲೆಕೆಳಗಾಗಿ ಶವವನ್ನು ಹಾಕಿ ತಕ್ಷಣ ಮುಚ್ಚಿದ್ದರು.

ಘಟನೆ ಸಂಬಂಧ ರಾಜಶೇಖರ್ ಅವರ ತಂದೆ, ತಾಯಿಗೆ ಕೆಲಸಕ್ಕೆ ಹೋಗಿರುವುದಾಗಿ ನಂಬಿಸಿದ್ದರು. ಅಲ್ಲದೆ, ಟಾಯ್ಲೆಟ್ ಗುಂಡಿಗೆ ಮಣ್ಣು ಹಾಕಿ ಮುಚ್ಚಿಸಿದ್ದರು. ಬಳಿಕ ರಾಜಶೇಖರ್ ಕಾಣೆಯಾಗಿರುವ ಬಗ್ಗೆ ಅವರ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ಟಾಯ್ಲೆಟ್ ಗುಂಡಿಯ ಸುತ್ತ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ, ಗ್ರಾಮಸ್ಥರ ಎದುರಲ್ಲಿ ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿತ್ತು. ಎಫ್​ಎಸ್ಎಲ್ ವರದಿಯಲ್ಲಿ ಉಸಿರುಗಟ್ಟಿ ರಾಜಶೇಖರ್ ಅಸುನೀಗಿರುವುದು ದೃಢವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments