Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಮಹಿಳಾ ವಿಶ್ವಕಪ್:‌ ಭಾರತದ ಬೃಹತ್‌ ಮೊತ್ತದ ಕನಸಿಗೆ ಮಿಥಾಲಿ, ದೀಪ್ತಿ ಅರ್ಧಶತಕದ ಬಲ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
shefali verma

ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಮತ್ತು ದೀಪ್ತಿ ಶರ್ಮ ಅವರ ಬಿರುಸಿನ ಅರ್ಧಶತಕಗಳ ನೆರವಿನಿಂದ ಭಾರತ ತಂಡ ಮಹಿಳೆಯರ ಏಕದಿನ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಬೃಹತ್‌ ಮೊತ್ತದ ಸವಾಲೊಡ್ಡಿದೆ.

ನವೀ ಮುಂಬೈನಲ್ಲಿ ಮಳೆಯ ಕಾರಣ ತಡವಾಗಿ ಆರಂಭಗೊಂಡ ಫೈನಲ್‌ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಭಾರತ ತಂಡ 50 ಓವರ್‌ ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 298 ರನ್‌ ಪೇರಿಸಿತು.

ವಿಶ್ವದಾಖಲೆ ಜೊತೆಯಾಟ

ಭಾರತ ತಂಡಕ್ಕೆ ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂದಾನ ಮೊದಲ ವಿಕೆಟ್‌ ಗೆ 104 ರನ್‌ ಜೊತೆಯಾಟದಿಂದ ಭಾರತಕ್ಕೆ ಭರ್ಜರಿ ಆರಂಭ ಒದಗಿಸಿಕೊಟ್ಟಿದ್ದೂ ಅಲ್ಲದೇ ವಿಶ್ವಕಪ್‌ ಫೈನಲ್‌ ನಲ್ಲಿ ಅತೀ ದೊಡ್ಡ ಜೊತೆಯಾಟ ನಿಭಾಯಿಸಿದ ವಿಶ್ವದಾಖಲೆಗೆ ಪಾತ್ರರಾದರು.

ಸ್ಮೃತಿ ಮಂದಾನ 58 ಎಸೆತಗಳಲ್ಲಿ 8 ಬೌಂಡರಿ ಸಹಾಯದಿಂದ 45 ರನ್‌ ಗಳಿಸಿದ್ದಾಗ ಟ್ರಿಯಾನ್‌ ಎಸೆತದಲ್ಲಿ ಬೌಂಡರಿ ಹೊಡೆಯುವ ಯತ್ನದಲ್ಲಿ ವಿಫಲರಾಗಿ ಅರ್ಧಶತಕದಿಂದ ವಂಚಿತರಾದರು. ಶೆಫಾಲಿ 38 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ ನೊಂದಿಗೆ 87 ರನ್‌ ಗಳಿಸಿದ್ದಾಗ ಇಲ್ಲದ ಹೊಡೆತಕ್ಕೆ ಯತ್ನಿಸಿ ವಿಕೆಟ್‌ ಕೈಚೆಲ್ಲುವ ಮೂಲಕ ಶತಕ ವಂಚಿತರಾದರು.

ಸೆಮಿಫೈನಲ್‌ ಪಂದ್ಯದಲ್ಲಿ ಶತಕ ಸಿಡಿಸಿ ಭಾರತ ಫೈನಲ್‌ ತಲುಪುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಜೆಮಿಹಾ ರೋಡ್ರಿಗಜ್‌ 37 ಎಸೆತಗಳಲ್ಲಿ 1 ಬೌಂಡರಿ ಸಹಾಯದಿಂದ 24 ರನ್‌ ಬಾರಿಸಿ ಔಟಾದರೆ, ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ (20) ನಿರಾಸೆ ಮೂಡಿಸಿದರು.

ಈ ಹಂತದಲ್ಲಿ ದೀಪ್ತಿ ಶರ್ಮ 58 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್‌ ಒಳಗೊಂಡ 58 ರನ್‌ ಬಾರಿಸಿ ಔಟಾದರೆ, ರಿಚಾ ಘೋಷ್‌ 24 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ಸಹಾಯದಿಂದ 34 ರನ್‌ ಬಾರಿಸಿದರು. ಇವರಿಬ್ಬರು ಆಡುತ್ತಿದ್ದಾಗ ಭಾರತ 300ರ ಗಡಿ ದಾಟುವ ಭರವಸೆ ಮೂಡಿಸಿತ್ತು. ಆದರೆ ಕೊನೆಯ ಹಂತದಲ್ಲಿ ಇವರು ಔಟಾಗಿದ್ದರಿಂದ ತಂಡ 300 ರನ್‌ ಪೇರಿಡುವಲ್ಲಿ ಎಡವಿತು.

ದಕ್ಷಿಣ ಆಫ್ರಿಕಾದ ಕ್ಷೇತ್ರರಕ್ಷಣೆ ಕಳಪೆಯಾಗಿದ್ದು, ನಾಲ್ಕೈದು ಕ್ಯಾಚ್‌ ಕೈಚೆಲ್ಲಿ ಭಾರತದ ಆಟಗಾರ್ತಿಯರಿಗೆ ಅವಕಾಶ ನೀಡಿದರು. ಅಯಬೊಂಗಾ ಖಾಕಾ 58 ರನ್‌ ನೀಡಿ 3 ವಿಕೆಟ್‌ ಪಡೆದು ಪ್ರಭಾವಿ ಆದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment