ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿ ಮಾಡಿ 3ನೇ ಬಾರಿ ಅಧಿಕಾರ ಪಡೆಯುವ ಹಕ್ಕನ್ನು ಮಂಡಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ 292 ಸ್ಥಾನ ಲಭಿಸಿದ್ದು, ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಅಧಿಕಾರ ಮಂಡನೆ ಮಾಡಿದ್ದು, ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಸ್ವಾತಂತ್ರ್ಯ ನಂತರ ಕಾಂಗ್ರೆಸ್ ನೇತೃತ್ವದಲ್ಲಿ ಜವಹರಲಾಲ್ ನೆಹರು ಸತತ ಮೂರು ಬಾರಿ ಪ್ರಧಾನಿ ಆದ ಮೊದಲಿಗ ಹಾಗೂ ಕಾಂಗ್ರೆಸ್ಸೇತರ ಪಕ್ಷದ ನಾಯಕ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಲಿದ್ದಾರೆ.
ಬುಧವಾರ ರಾಷ್ಟ್ರಪತಿಯನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ ಮೋದಿ, ಹಳೆಯ ಸರ್ಕಾರವನ್ನು ವಿಸರ್ಜಿಸಲು ಮನವಿ ಮಾಡಿದರು. ಇದೇ ವೇಳೆ ಸರ್ಕಾರ ರಚನೆಗೆ ಅಧಿಕಾರ ಮಂಡಿಸಿದ್ದಾರೆ ಎಂದು ಹೇಳಲಾಗಿದೆ.