Thursday, May 28, 2026
Google search engine
Homeರಾಜ್ಯಗ್ರೇಟರ್ ಮೈಸೂರು ರಚನೆಗೆ ವೈಜ್ಞಾನಿಕ ನೀಲನಕ್ಷೆ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗ್ರೇಟರ್ ಮೈಸೂರು ರಚನೆಗೆ ವೈಜ್ಞಾನಿಕ ನೀಲನಕ್ಷೆ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಮೈಸೂರಿನ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗದಂತೆ ಗ್ರೇಟರ್ ಮೈಸೂರು ಅಭಿವೃದ್ಧಿಗೆ ವೈಜ್ಞಾನಿಕವಾಗಿ ನೀಲನಕ್ಷೆ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೈಸೂರು ಪಾಲಿಕೆ ಕಚೇರಿಯಲ್ಲಿ ತಮ್ಮದೇ ಅಧ್ಯಕ್ಷತೆಯಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಬೆಂಗಳೂರಿನ‌ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಲು ಸೂಚಿಸಿದರು.

ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು. ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಬೇಕು ಎಂದು ಅವರು ಸಲಹೆ ನೀಡಿದರು.

ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧನಿಕ‌ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ‌ ತಂತ್ರಜ್ಞಾನದ ನೆರವು ಪಡೆಯಬೇಕು ಎಂದು ಅವರು ಹೇಳಿದರು.

ಬಡಾವಣೆಗಳ ನಿರ್ಮಾಣದಲ್ಲಿ  ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು. ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ plan ಮಾಡಿಕೊಳ್ಳಿ ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ಆಗಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ,  ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು. ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments