ಗಂಡನನ್ನು ಹೆಂಡತಿ ಕೊಲೆ ಮಾಡುವುದು, ಹೆಂಡತಿಯನ್ನು ಗಂಡ ಕೊಲೆ ಮಾಡುವ ಘಟನೆಗಳೇ ಹೆಚ್ಚಾಗುತ್ತಿರುವ ಈ ಕಾಲದಲ್ಲಿ ದಂಪತಿ ಸಾವಿನಲ್ಲೂ ಒಂದಾದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.
ಹೃದಯಾಘಾತದಿಂದ ಪತಿ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾದ ಪತ್ನಿ ಕೂಡ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ.
ಶಶಿಧರ್ ಪತ್ತಾರ (40), ಸರೋಜಾ (35) ಸಾವಿನಲ್ಲೂ ಒಂದಾದ ದಂಪತಿ.
ಶಶಿಧರ್‌ಗೆ ಲೋ ಬಿಪಿಯಾಗಿ ಆಸ್ಪತ್ರೆಗೆ ಸಾಗಿಸುವಾಗ ಹೃದಯಾಘಾತದಿಂದ ಮೃತಪಟ್ಟಿದ್ದರು. ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ (ಸರೋಜಾಗೆ ಹೃದಯಾಘಾತವಾಗಿದೆ ಮನೆಯಲ್ಲೇ ಮೃ
ಚಿನ್ನದ ಅಂಗಡಿ ನಡೆಸುತ್ತಿದ್ದ ಶಶಿಧರ ಹದಿನೈದು ವರ್ಷಗಳ ಹಿಂದೆ ಸರೋಜಾ ಅವರನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶಶಿಧರ್ ಗೆ ಹೃದಯಾಘಾತವಾಗಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ.
ಈ ಹೃದಯವಿದ್ರಾವಕ ಘಟನೆಯಿಂದ ಬೀಳಗಿ ಪಟ್ಟಣದ ಜನರು ಆಘಾತಗೊಂಡಿದ್ದಾರೆ. ಕುಟುಂಬದವರ ಆಕ್ರಂದನ ಮೇರೆ ಮೀರಿದೆ.



