Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿ ಕೃಷ್ಣಾರೆಡ್ಡಿ ನೇಮಕ: ಜಿಟಿ ದೇವೇಗೌಡಗೆ ಕೊಕ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
gt devegowda
gt devegowda

ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ಪ್ರಮುಖರ ಸಮಿತಿ (ಕೋರ್ ಕಮಿಟಿ) ಯನ್ನು ಪುನಾರಚನೆ ಮಾಡಲಾಗಿದ್ದು, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಹಿರಿಯ ನಾಯಕ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೋಮವಾರ 20 ಸದಸ್ಯರ ಕೋರ್ ಕಮಿಟಿಯನ್ನು ಪುನರಚನೆ ಮಾಡಿದ್ದು, 20 ಸದಸ್ಯರ ಚಿಂತಾಮಣಿಯ ಮಾಜಿ ಶಾಸಕ ಹಾಗೂ ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ ಅವರನ್ನು ಸಮಿತಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಅರಕಲಗೂಡು ಶಾಸಕ ಎ. ಮಂಜು ಅವರನ್ನು ಕೋರ್ ಕಮಿಟಿಯ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಹಲವು ವರ್ಷಗಳಿಂದ ಅಧ್ಯಕ್ಷರಾಗಿದ್ದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿಟಿ ದೇವೇಗೌಡರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಲಾಗಿದೆ.

ಮಾಜಿ ಶಾಸಕ ರಾಜವೆಂಕಟಪ್ಳ ನಾಯಕ ದೊರೆ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಎಂ. ಮಲ್ಲೇಶ್ ಬಾಬು, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಆಲ್ಕೋಡ ಹನುಮಂತಪ್ಪ, ಹೆಚ್.ಕೆ. ಕುಮಾರಸ್ವಾಮಿ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ಹೆಚ್.ಎಸ್. ಶಿವಶಂಕರ್, ಕೆ.ಎಂ. ತಿಮ್ಮರಾಯಪ್ಪ, ಎ. ಮಂಜುನಾಥ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಕೆ.ಜಿ. ಪ್ರಸನ್ನಕುಮಾರ್, ಶಾಸಕರಾದ ಕರೆಮ್ಮ ನಾಯಕ, ನೇಮಿರಾಜ ನಾಯಕ, ಸಮೃದ್ಧಿ ಮಂಜುನಾಥ್, ಶರಣುಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಹಿರಿಯ ನಾಯಕ ಸಿ.ವಿ. ಚಂದ್ರಶೇಖರ್ ಅವರನ್ನು ಕೋರ್ ಕಮಿಟಿ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment