ದೆಹಲಿಯ ಐತಿಹಾಸಿಕ ಕೆಂಪುಕೋಟೆ ದ್ವಾರದ ಬಳಿ ಕಾರದೊಂದು ಸ್ಫೋಟಗೊಂಡ ಪರಿಣಾಮ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ.
ಸೋಮವಾರ ರಾತ್ರಿ ಕೆಂಪುಕೋಟೆಯ ಮೆಟ್ರೋ ರೈಲಿನ ದ್ವಾರದ 1 ರ ಬಳಿ ಕಾರು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಹಲವು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಕನಿಷ್ಠ 4 ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಸ್ಫೋಟದ ಮಾಹಿತಿ ಲಭಿಸುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಕಾರಿನಲ್ಲಿ ಆರಂಭದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ನಂತರ ಸ್ಫೋಟಗೊಂಡಿದೆ. ಸ್ಫೋಟಕ್ಕೆ ಕಾರಣ ತಿಳಿದು ಬಂದಿಲ್ಲ.
ಕೆಂಪುಕೋಟೆಯನ್ನು ಲಾಲ್ ಕಿಲಾ ಎಂದು ಕೂಡ ಕರೆಯಲಾಗುತ್ತದೆ. ಇಲ್ಲಿಗೆ ಸಮೀಪವೇ ಕಾಂಗ್ರೆಸ್ ಹಳೆಯ ಕಚೇರಿ ಕೂಡ ಇದೆ. ದೇಶದ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಾಗ ಕೂಡ ಇದಾಗಿದೆ.



