Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ದೇಶ

ಭಾರತದಲ್ಲಿ ಜೈಶೆ ಉಗ್ರರ ಮಹಿಳಾ ಘಟಕ ಸ್ಥಾಪಿಸಲು ಮುಂದಾಗಿದ್ದ ವೈದ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 24 ವೀಕ್ಷಣೆಗಳು
jaish e mohammed

ಲಕ್ನೋ: ಫರೀದಾಬಾದ್‌ನಲ್ಲಿ ನಡೆದ ಬೃಹತ್ ಸ್ಫೋಟಕಗಳ ಸಾಗಣೆ ಪ್ರಕರಣಕ್ಕೆ ಸಂಬಂಧ ಬಂಧಿತ ಲಕ್ನೋ ಮೂಲದ ವೈದ್ಯೆ ಭಾರತದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಇಎಂ) ಮಹಿಳಾ ವಿಭಾಗವನ್ನು ಸ್ಥಾಪಿಸುವ ಜವಾಬ್ದಾರಿ ವಹಿಸಿಕೊಂಡಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಪಾಕಿಸ್ತಾನದ ಜೆಇಎಂ ಸಂಸ್ಥಾಪಕ ಮಸೂದ್ ಅಜರ್ ಅವರ ಸಹೋದರಿ ಸಾದಿಯಾ ಅಜರ್ ನೇತೃತ್ವದ ಜೆಎಂನ ಮಹಿಳಾ ವಿಭಾಗ ಜಮಾತ್ ಉಲ್-ಮೊಮಿನಾತ್‌ನ ಭಾರತ ಶಾಖೆಯ ಜವಾಬ್ದಾರಿಯನ್ನು ಡಾ.ಶಾಹೀನ್ ಶಾಹಿದ್​ಗೆ ವಹಿಸಲಾಗಿತ್ತು ಎನ್ನುವ ಮಾಹಿತಿ ತನಿಖೆಯಲ್ಲಿ ಪತ್ತೆಯಾಗಿದೆ.

ಸಾದಿಯಾ ಅಜರ್ ಪತಿ ಯೂಸುಫ್ ಅಜರ್ ಕಂದಹಾರ್ ವಿಮಾನ ಅಪಹರಣದ ಪ್ರಮುಖ ಸಂಚುಕೋರನಾಗಿದ್ದು, ಮೇ 7 ರಂದು ಆಪರೇಷನ್ ಸಿಂಧೂರ್ ಸಮಯದಲ್ಲಿ ಮೃತಪಟ್ಟಿದ್ದ ಎಂದು ವರದಿಯಾಗಿದೆ.

ಶಾಹೀನ್ ಶಾಹಿದ್ ಲಕ್ನೋದ ಲಾಲ್ ಬಾಗ್ ನಿವಾಸಿಯಾಗಿದ್ದು, ಫರಿದಾಬಾದ್‌ನಲ್ಲಿ ಜೆಇಎಂನ ಭಯೋತ್ಪಾದಕ ಮಾಡ್ಯೂಲ್ ಬೇಧಿಸಿದ ನಂತರ ಆಕೆಯನ್ನು ಬಂಧಿಸಲಾಯಿತು ಮತ್ತು ಆಕೆಯ ಕಾರಿನಿಂದ ಒಂದು ಅಸಾಲ್ಟ್ ರೈಫಲ್ ಅನ್ನು ವಶಪಡಿಸಿಕೊಳ್ಳಲಾಯಿತು.

ಶಾಹೀನ್ ಅಲ್-ಫಲಾಹ್ ವಿಶ್ವವಿದ್ಯಾಲಯದ ಭಾಗವಾಗಿದ್ದು, ಫರಿದಾಬಾದ್‌ನಲ್ಲಿ ಬಾಡಿಗೆಗೆ ಪಡೆದಿದ್ದ ಎರಡು ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಬಂಧಿಸಲ್ಪಟ್ಟ ಕಾಶ್ಮೀರಿ ವೈದ್ಯ ಮುಜಮ್ಮಿಲ್ ಗನೈ ಅಲಿಯಾಸ್ ಮುಸೈಬ್​ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾಳೆಂದು ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮೂಲದ ಮುಜಮ್ಮಿಲ್, ದೆಹಲಿಯಿಂದ 45 ಕಿ.ಮೀ ದೂರದಲ್ಲಿರುವ ಧೌಜ್‌ನಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ವೈದ್ಯರಾಗಿದ್ದರು. ಶ್ರೀನಗರದಲ್ಲಿ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸಿ ಹಾಕಲಾದ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ಜೆಕೆ ಪೊಲೀಸರು ಮುಜಮ್ಮಿಲ್ ಅವರನ್ನು ವಾಂಟೆಡ್ ವ್ಯಕ್ತಿ ಎಂದು ಹೆಸರಿಸಿದ ನಂತರ ಬಂಧಿಸಲಾಗಿತ್ತು.

ಪೊಲೀಸರಿಗೆ ಅಮೋನಿಯಂ ನೈಟ್ರೇಟ್ ಎಂದು ಶಂಕಿಸಲಾದ ಸ್ಫೋಟಕ ವಸ್ತು, 20 ಟೈಮರ್‌ಗಳು ಮತ್ತು ಇತರ ಅನುಮಾನಾಸ್ಪದ ವಸ್ತುಗಳನ್ನು ಪತ್ತೆಹಚ್ಚಲು ಸಹಾಯ ಮಾಡಿತು. ವರದಿಗಳ ಪ್ರಕಾರ, ಹೊಸ ಘಟಕಕ್ಕೆ ನೇಮಕಾತಿ ಅಕ್ಟೋಬರ್ 8 ರಂದು ಪಾಕಿಸ್ತಾನದ ಬಹವಾಲ್ಪುರದ ಮರ್ಕಜ್ ಉಸ್ಮಾನ್-ಒ-ಅಲಿಯಲ್ಲಿ ಪ್ರಾರಂಭವಾಯಿತು.

ಮಸೂದ್ ಅಜರ್‌ನ ಸಹೋದರಿ ಸಾದಿಯಾ ಅಜರ್ ಈ ಗುಂಪಿನ ನೇತೃತ್ವ ವಹಿಸಿದ್ದು, ಇದು ಜೆಇಎಂ ಕಮಾಂಡರ್‌ಗಳ ಪತ್ನಿಯರನ್ನು ಹಾಗೂ ಬಹಾವಲ್‌ಪುರ, ಕರಾಚಿ, ಮುಜಫರಾಬಾದ್, ಕೋಟ್ಲಿ, ಹರಿಪುರ ಮತ್ತು ಮನ್ಸೆಹ್ರಾದಲ್ಲಿರುವ ತನ್ನ ಕೇಂದ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ಆರ್ಥಿಕವಾಗಿ ದುರ್ಬಲ ಮಹಿಳೆಯರನ್ನು ಸೇರಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment