Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕಾನೂನು

ಮಟ್ಟಣ್ಣನವರ್, ತಿಮರೋಡಿಗೆ ಸಂಕಷ್ಟ: ಧರ್ಮಸ್ಥಳ ಪ್ರಕರಣದ ತಡೆಯಾಜ್ಞೆ ತೆರವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು
Dharmasthala mass burial

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಗೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಇದರಿಂದ ಪಿತೂರಿ ಆರೋಪ ಎದುರಿಸುತ್ತಿರುವವರು ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಹಾಜರಾಗುವ ಸಾಧ್ಯತೆ ಇದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ. ಜಯಂತ್ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣ (ಎಫ್‌ಐಆರ್39/2025) ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ, ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಮತ್ತು ವಿಠಲ್‌ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರಿದ್ದ ನ್ಯಾಯಪೀಠ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದೆ.

ವಿಚಾರಣೆ ವೇಳೆ ”ಅರ್ಜಿದಾರರಿಗೆ ಈ ಹಿಂದೆ ಹಲವು ಬಾರಿ ನೋಟಿಸ್‌ ನೀಡಿರುವುದು 150 ತಾಸು ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ, ಆ ನೋಟಿಸ್‌ ಮತ್ತು ವಿಚಾರಣೆ ನಡೆಸಿರುವ ಸಂದರ್ಭದಲ್ಲಿ ಅರ್ಜಿದಾರರನ್ನು ಸಾಕ್ಷಿಗಳನ್ನಾಗಿ ಪರಿಗಣಿಸಲಾಗಿತ್ತು. ಇದೀಗ ಅರ್ಜಿದಾರರನ್ನು ಆರೋಪಿಗಳನ್ನಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ” ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರು. ವಾದ ಆಲಿಸಿದ ಪೀಠ, ತಡೆಯಾಜ್ಞೆ ತೆರವುಗೊಳಿಸಿ ವಿಚಾರಣೆಯನ್ನು ಮುಂದೂಡಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment