Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ದೇಶ

ಬಾಗಲಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಬ್ಬು ಬೆಳೆಗಾರರ ಪ್ರತಿಭಟನೆ: 100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 30 ವೀಕ್ಷಣೆಗಳು
farmers protest

ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ.

ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಬ್ಬಿಗೆ 3,300 ರೂ. ದರ ನಿಗದಿ ಮಾಡಲಾಗಿತ್ತು. ಕಬ್ಬು ಬೆಳೆಗಾರರು ರಾಜ್ಯಾದ್ಯಂತ ಪ್ರತಿಭಟನೆ ವಾಪಸ್ ಪಡೆದರೂ ಮುಧೋಳದಲ್ಲಿ ರೈತರು ಕನಿಷ್ಠ 3500 ರೂ. ಬೆಂಬಲ ಬೆಲೆಗೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ್ದರು.

ಸಮೀರವಾಡಿಯ ಗೋದಾವರಿ ಕಾರ್ಖಾನೆ ಆವರಣದಲ್ಲಿ ಗುರುವಾರ ಸಂಜೆಯವರೆಗೂ ಶಾಂತಿಯುತವಾಗಿ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳು ಅಲ್ಲದೇ ಸಾವಿರಾರು ಟನ್ ಕಬ್ಬು ತುಂಬಿದ್ದ 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ ಹೊತ್ತಿಕೊಂಡು ಅಪಾರ ನಷ್ಟವುಂಟಾಗಿದೆ. ಇದರಿಂದ ಉತ್ತಮ ಫಸಲು ಪಡೆದಿದ್ದ ರೈತರು ಕಬ್ಬು ಬೆಂಕಿಗೆ ಆಹುತಿ ಆಗಿದ್ದರಿಂದ ಕಣ್ಣೀರು ಹಾಕಿದ್ದಾರೆ.

ರೈತರು ಹಾಗೂ ಕಾರ್ಖಾನೆಗಳ ನಡುವೆ ದರ ನಿಗದಿ ಬಗ್ಗೆ ಹೊಂದಾಣಿಕೆ ಆಗಿರಲಿಲ್ಲ. ಅಲ್ಲದೇ ಸರ್ಕಾರ ಕೂಡ ಮಾತುಕತೆಗೆ ಆಹ್ವಾನಿಸಿಲ್ಲ ಎಂದು ಪ್ರತಿಭಟನಾ ನಿರತ ರೈತರು ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ತಿಳಿದು ಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment