Thursday, June 25, 2026
Google search engine
Homeರಾಜ್ಯನಾಳೆ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ: ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ಸಾರ್ವಜನಿಕ ದರ್ಶನ

ನಾಳೆ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ: ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ ಸಾರ್ವಜನಿಕ ದರ್ಶನ

ಬೆಂಗಳೂರು: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ನ.15ರ ಶನಿವಾರ ಬೆಳಗ್ಗೆ 12 ಗಂಟೆಗೆ ಜ್ಞಾನಭಾರತಿಯ ಕಲಾ ಗ್ರಾಮದ ಆವರಣದಲ್ಲಿ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಮರಗಳನ್ನೇ ಮಕ್ಕಳಂತೆ ಸಲಹಿ, ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಗ್ಗೆ 7.30ಗಂಟೆಯಿಂದ 10.30 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು, ನಂತರ ಜ್ಞಾನಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ನಿಧನ

ಅತ್ಯಂತ ಕಡುಬಡತನದಲ್ಲೂ ಪರಿಸರ ಸಂರಕ್ಷಣೆ ಮಾಡಿ ಮನೆಮಾತಾಗಿದ್ದ ಪದ್ಮಶ್ರೀ ಪುರಸ್ಕೃತೆ ಹಾಗೂ ಶತಾಯುಷಿ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮದಲ್ಲಿ 1911 ಜೂನ್ 30ರಂದು ಜನಿಸಿದ್ದ ತಿಮ್ಮಕ್ಕ ಅದೇ ಗ್ರಾಮದ ಚಿಕ್ಕಯ್ಯ ಅವರನ್ನು ವಿವಾಹವಾಗಿದ್ದರು.

ತಿಮ್ಮಕ್ಕ ಯಾವುದೇ ನೆರವಿಲ್ಲದೇ ತನ್ನ ಸಂಪಾದನೆಯಿಂದಲೇ ಲಕ್ಷಾಂತರ ಮರಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಿದ್ದರು. ಇವರ ಪರಿಸರ ಕಾಳಜಿ ಗಮನಿಸಿ ಕೇಂದ್ರ ಸರ್ಕಾರ 2019ರಲ್ಲಿ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು.

2020ರಲ್ಲಿ ಕರ್ನಾಟಕ ಕೇಂದ್ರೀಯ ವಿವಿಯಿಂದ ಗೌರವ ಡಾಕ್ಟರೇಟ್, 2020ರಲ್ಲಿ ಹಂಪಿ ವಿವಿಯ ನಾಡೋಜಾ ಪ್ರಶಸ್ತಿ ಅಲ್ಲದೇ ಪರಿಸರ ನಾಗರಿಕ ಪ್ರಶಸ್ತಿ, ಪರಿಸರ ರತ್ನ ಪ್ರಶಸ್ತಿ,ವೃಕ್ಷ ಮಾತಾ,  ಗ್ರೀನ್ ಚಾಂಪಿಯನ್ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments