ಭಾರತದ ಫುಟ್ಬಾಲ್ ದಂತಕತೆ ಸುನೀಲ್ ಛೆಟ್ರಿ ಅವರ ವೃತ್ತಿ ಜೀವನದ ಕೊನೆಯ ಪಂದ್ಯವಾದ ಭಾರತ ಮತ್ತು ಕುವೈತ್ ನಡುವಿನ ಫಿಫಾ ವಿಶ್ವಕಪ್ ಅರ್ಹತಾ ಸುತ್ತಿನ ಪಂದ್ಯ 0-0ಯಿಂದ ಡ್ರಾದಲ್ಲಿ ಅಂತ್ಯಗೊಂಡಿದೆ.
ಕೋಲ್ಕತಾದ ಸಾಲ್ಟ್ ಲೇಖ್ ಮೈದಾನದಲ್ಲಿ ನಡೆದ ಪಂದ್ಯ ಸುನೀಲ್ ಛೆಟ್ರಿ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಅಭಿಮಾನಿಗಳು ಎದ್ದುನಿಂತು ಗೌರವ ಸಲ್ಲಿಸಿದ್ದರಿಂದ ಛೆಟ್ರಿ ಕೆಲವು ಕ್ಷಣ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರು ಹಾಕಿದರು.
ಪಂದ್ಯದ ನಂತರ ಅಭಿಮಾನಿಗಳು ಎದ್ದು ನಿಂತು ಗೌರವ ಸಲ್ಲಿಸಿದರು. ಇದರಿಂದ ಕೆಲವು ಕ್ಷಣ ಭಾವೋದ್ವೇಗಕ್ಕೆ ಒಳಗಾದ ಛೆಟ್ರಿ ಕಣ್ಣೀರು ಹಾಕಿ ಅಭಿನಂದನೆ ಸ್ವೀಕರಿಸಿದರು.
ಭಾರತ ತಂಡದ ನಾಯಕರಾಗಿರುವ ಸುನೀಲ್ ಛೆಟ್ರಿ ಅಂತಾರಾಷ್ಟ್ರೀಯ ಟೂರ್ನಿಯಲ್ಲಿ ಅತೀ ಹೆಚ್ಚು 94 ಗೋಲು ಬಾರಿಸಿದ ದಾಖಲೆ ಹೊಂದಿದ್ದಾರೆ. ಜಾಗತಿಕ ಮಟ್ಟದಲ್ಲಿ ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಪೋರ್ಚುಗಲ್ ನ ಕ್ರಿಸ್ಟಿಯಾನೊ ರೊನಾಲ್ಡೊ, ಅರ್ಜೆಂಟೀನಾದ ಲಿಯೊನೆಲ್ ಮೆಸ್ಸಿ ಮತ್ತು ಅಲಿ ದುಡೈ ನಂತರದ ಸಾರ್ವಕಾಲಿಕ ಶ್ರೇಷ್ಠ ಆಟಗಾರರ ಪಟ್ಟಿಯಲ್ಲಿ ಸುನೀಲ್ ಛೆಟ್ರಿ ಗುರುತಿಸಿಕೊಂಡಿದ್ದಾರೆ.
58 ಸಾವಿರಕ್ಕೂ ಅಧಿಕ ಅಭಿಮಾನಿಗಳು ಸುನೀಲ್ ಛೆಟ್ರಿ ವಿದಾಯದ ಪಂದ್ಯ ವೀಕ್ಷಿಸಲು ಆಗಮಿಸಿದ್ದರು. ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ ಸುನೀಲ್ ಛೆಟ್ರಿ ಕುವೈತ್ ದಾಳಿಯನ್ನು ಭೇದಿಸಿ ಗೋಲು ಗಳಿಸಲು ಯತ್ನಿಸಿದರು. ಆದರೆ ಕುವೈತ್ ಯಾವುದೇ ಗೋಲು ಬಿಟ್ಟುಕೊಡಲಿಲ್ಲ.