Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ: ಮಸಣ ಸೇರಿದ ಕೃಷ್ಣನ ದರ್ಶನಕ್ಕೆ ಹೊರಟವರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
car accident

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲೂಕಿನ ಬಿಸಿ ರೋಡ್ ಬಳಿ​ ಸರ್ಕಲ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಬೆಂಗಳೂರಿನ ಪೀಣ್ಯ ನಿವಾಸಿಗಳಾದ ರವಿ (64), ರಮ್ಯಾ (23) ಹಾಗೂ ನಂಜಮ್ಮ (75) ಮೃತಪಟ್ಟಿದ್ದಾರೆ. ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಸುಬ್ರಹ್ಮಣ್ಯ ಹಾಗೂ ಕಿರಣ್ ಎಂಬವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ.

ಉಡುಪಿಯ ಶ್ರೀಕೃಷ್ಣನ ದರ್ಶನಕ್ಕಾಗಿ ಇನ್ನೋವಾ ಕಾರಿನಲ್ಲಿ ಹೋಗುತ್ತಿದ್ದಾಗ ಶನಿವಾರ ಮುಂಜಾನೆ ಸುಮಾರು 4.40ರ ಸಮಯದಲ್ಲಿ ಬಿ.ಸಿ.ರೋಡ್ ಎನ್.ಜಿ. ಸರ್ಕಲ್​ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟ್ಟಿದ್ದು, ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ. ಸುತೇಶ್ ಹಾಗೂ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪಣಂಬೂರಿನಲ್ಲಿ ಅಪಘಾತಕ್ಕೆ ಮೂವರು ಬಲಿ

ಪಣಂಬೂರು ಜಂಕ್ಷನ್​ ಬಳಿ ಸಂಭವಿಸಿದ ಸರಣಿ ವಾಹನ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ಮಂಗಳೂರಿನ ಕೊಣಾಜೆ ಬಳಿಯ ಮೊಂಟೆಪದವು ನಿವಾಸಿಗಳಾದ ಮೊಹಮ್ಮದ್ ಕುಂಞಿ (25), ಅಬೂಬಕ್ಕರ್ (65) ಮತ್ತು ಇಬ್ರಾಹಿಂ (68) ಮೃತಪಟ್ಟಿದ್ದಾರೆ.

ದನ ರಸ್ತೆ ದಾಟುತ್ತಿರುವುದನ್ನು ನೋಡಿ ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್​​ ಚಾಲಕ ತಕ್ಷಣ ನಿಲ್ಲಿಸಿದ್ದಾನೆ. ಆಗ ಅದರ ಹಿಂದೆ ಬರುತ್ತಿದ್ದ ಆಟೋ ರಿಕ್ಷಾವನ್ನೂ ನಿಲ್ಲಿಸಿದ್ದು, ಇದರಿಂದ ಹಿಂಬದಿಯಲ್ಲಿದ್ದ ಇನ್ನೋವಾ ಕಾರನ್ನು ಕೂಡ ಚಾಲಕ ನಿಲ್ಲಿಸಿದ್ದಾನೆ.

ಇದೇ ಸಂದರ್ಭದಲ್ಲಿ ಹಿಂದುಗಡೆಯಿಂದ ಬರುತ್ತಿದ್ದ ಇನ್ನೊಂದು ಟ್ಯಾಂಕರ್ ವಾಹನ ರಭಸವಾಗಿ ಬಂದು ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎಡಭಾಗಕ್ಕೆ ಹೋಗಿದೆ. ಈ ಸಮಯದಲ್ಲಿ, ಆಟೋ ರಿಕ್ಷಾ ಎರಡೂ ಟ್ಯಾಂಕರ್​ ವಾಹನಗಳ ಮಧ್ಯೆ ಸಿಲುಕಿಕೊಂಡು ಅಪ್ಪಚ್ಚಿಯಾಗಿದೆ.

ಆಟೋ ರಿಕ್ಷಾ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment