Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಪ್ರತಿ ವರ್ಷ ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ 5 ಪರಿಸರವಾದಿಗಳಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 31 ವೀಕ್ಷಣೆಗಳು
cm siddaramiah

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ 1 ಕೋಟಿ ದತ್ತಿ ನಿಧಿ ಸ್ಥಾಪಿಸಿ  ಬಡ್ಡಿಯಲ್ಲಿ ಪ್ರತಿ ವರ್ಷವೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಬುಧವಾರ ನಡೆದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಜನ್ಮದಿನ. 1974ರ ಇಂದಿನ ದಿನದಂದು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿತವಾಯಿತು. ಇಂದಿರಾಗಾಂಧಿ ಪರಿಸರ ಮತ್ತು ಅರಣ್ಯ ರಕ್ಷಣೆಗೆ ಹಲವು ಪ್ರಮುಖ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಪರಿಸರ ಸಂರಕ್ಷಣೆಯ ಜವಾಬ್ದಾರಿ ಕೇವಲ ಸರ್ಕಾರದ ಮೇಲಿಲ್ಲ ಎಂದರು.

ಸಾರ್ವಜನಿಕರು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಭೂಮಿಯ ಮೇಲಿನ ಜೀವಸಂಕುಲಕ್ಕೆ ಉತ್ತಮ ಪರಿಸರದಲ್ಲಿ ಬದುಕಲು ಅವಶ್ಯ. ಮಾಲಿನ್ಯ ರಹಿತ ಪರಿಸರವನ್ನು ನಿರ್ಮಿಸುವುದು ಅತ್ಯಂತ ಅವಶ್ಯವಾಗಿದೆ. ನಾವು ಉಸಿರಾಡುವ ಗಾಳಿ, ನೀರು ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಅಗತ್ಯ. ಕೇಂದ್ರದ ವರದಿಯ ಪ್ರಕಾರ ದೇಶದ ಹಲವು ನಗರಗಳು ಮಾಲಿನ್ಯದಿಂದ ಕೂಡಿವೆ. ಈ ಪಟ್ಟಿಯಲ್ಲಿ ಬೆಂಗಳೂರು , ದಾವಣಗೆರೆ, ಕಲ್ಬುರ್ಗಿ ನಗರವೂ ಸೇರಿರುವುದು ಆತಂಕಕಾರಿ ವಿಷಯ. ನಮ್ಮ ರಾಜ್ಯವನ್ನು ವಾಸಯೋಗ್ಯವಾಗಿಸಲು , ಜನರೆಲ್ಲರೂ ಪರಿಸರ ಬಗ್ಗೆ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂದರು.

ಬೆಂಗಳೂರು ನಗರ ಒಂದರಲ್ಲೇ 900 ಟನ್ ಪ್ಲಾಸ್ಟಿಕ್ ಉತ್ಪಾದನೆಯಾಗುತ್ತದೆ. ಇದನ್ನು ಜನ ಅರ್ಥಮಾಡಿಕೊಳ್ಳದೇ ಹೋದರೆ ಪ್ಲಾಸ್ಟಿಕ್ ಮುಕ್ತ ನಗರವಾಗಲು ಸಾಧ್ಯವಿಲ್ಲ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿ, ಸರ್ಕಾರದ ಜೊತೆ ಕೈಜೋಡಿಸಿದಾಗ ಮಾತ್ರ 2030 ರ ಹೊತ್ತಿಗೆ ಬೆಂಗಳೂರನ್ನು ಪ್ಲಾಸ್ಟಿಕ್ ಮುಕ್ತ ನಗರವಾಗಿಸಲು ಸಾಧ್ಯ ಎಂದರು.

ಅತಿ ಹೆಚ್ಚು ಮಾಲಿನ್ಯ ಹೊಂದಿರುವ ನಗರಗಳ ಪಟ್ಟಿಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳು

ಕೇಂದ್ರದ ವರದಿಯ ಪ್ರಕಾರ 131 ನಗರಗಳು ಮಾಲಿನ್ಯದಿಂದ ಕೂಡಿದ್ದು, ನಿಗದಿತ ಮಟ್ಟಕ್ಕಿಂತಲೂ ಹೆಚ್ಚಿದೆ. ಅದರಲ್ಲಿ ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ ಮತ್ತು ಕಲಬುರಗಿ ಜಿಲ್ಲೆಗಳು ಸೇರಿವೆ. ಇದು ಆತಂಕಕಾರಿ ವಿಷಯ. ಬೆಂಗಳೂರಿನಲ್ಲಿ ವಾಸ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಮುಂದಿನ ದಿನಗಳಲ್ಲಿ ನಿರ್ಮಾಣವಾಗುವ ಸಾಧ್ಯತೆ ಇದೆ. ಅದಕ್ಕಾಗಿ ಎಲ್ಲರೂ ಪರಿಸರದ ಬಗ್ಗೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಸಾಲು ಮರದ ತಿಮ್ಮಕ್ಕ ಇದಕ್ಕೆ ಶ್ರೇಷ್ಠ ಉದಾಹರಣೆ ಎಂದರು. ಇತ್ತೀಚೆಗೆ ನಿಧನರಾದ ಅವರು ಬಹಳಷ್ಟು ಮರಗಿಡಗಳನ್ನು ತಮ್ಮ ಮಕ್ಕಳಂತೆ ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದರು. ಪ್ರತಿಯೊಬ್ಬರೂ ಸಾಲಮರದ ತಿಮ್ಮಕ್ಕನವರಂತೆ ಆಗಬೇಕು ಎನ್ನುವ ಆಶಯ ನಮ್ಮದು ಎಂದರು.

ಬೆಂಗಳೂರು ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಬೇಕು

ಬೆಂಗಳೂರು ಗಾರ್ಬೇಜ್ ನಗರ ಎಂಬ ಟೀಕೆಗೆ ನಗರ ಗುರಿಯಾಗುತ್ತಿದ್ದು,ಬೆಂಗಳೂರನ್ನು ಗಾರ್ಬೇಜ್ ನಗರವಾಗಿಸುವುದು ನಮ್ಮ ಉದ್ದೇಶವಲ್ಲ. ಪ್ಲಾಸ್ಟಿಕ್ ಮತ್ತು ಕಸ ಮುಕ್ತ ನಗರವಾಗಿಸಬೇಕು ಎನ್ನುವುದು ಸರ್ಕಾರದ ಉದ್ದೇಶ. ಜನರೂ ಹಸಿ ಮತ್ತು ಒಣ ತ್ಯಾಜ್ಯವನ್ನು ಬೇರ್ಪಡಿಸಬೇಕು ಎಂದು ಮನವಿ ಮಾಡಿದರು. ಕೈಗಾರಿಕೋದ್ಯಮಿಗಳು ತ್ಯಾಜ್ಯವನ್ನು ಸಾರ್ವಜನಿಕರಿಗೆ, ಸಮಾಜಕ್ಕೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ನಿರ್ವಹಿಸುವುದು ಕೈಗಾರಿಕೋದ್ಯಮಿಗಳ ಜವಾಬ್ದಾರಿ ಎಂದರು.

ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಕೈಗಾರಿಕೆಗಳು ಅಗತ್ಯ. ಆದರೆ ಪರಿಸರ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸುವುದು ಅವಶ್ಯಕ . ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯಲ್ಲಿ ತೊಡಗಿ ಇತರರಿಗೆ ಮಾದರಿಯಾಗಬೇಕು. ತಿಮ್ಮಕ್ಕ ಪರಿಸರವಾದಿಯಾಗಿದ್ದರಿಂದ ನಾವು ಅವರನ್ನು ನೆನೆಸುತ್ತಿದ್ದೇವೆ. ವಿದ್ಯಾರ್ಥಿಗಳು ಪ್ರತಿ ವರ್ಷ ಇಂಥ ಸಮಾರಂಭಗಳನ್ನು ಆಯೋಜಿಸಿ ಜಾಗೃತಿ ಉಂಟುಮಾಡಬೇಕು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment