ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್ 100ರ ಹೊಸ್ತಿಲಲ್ಲಿ ನಿಂತಿತ್ತು. ಆದರೆ ಇದೀಗ ಮಹಾರಾಷ್ಟ್ರದ ಬಂಡಾಯ ಸಂಸದ ಪಕ್ಷಕ್ಕೆ ಮರಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಮೂರಂಕಿ ತಲುಪಿದೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶಾಲ್ ಪಟೇಲ್ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಸದರ ಸಂಖ್ಯೆ 100 ಗಡಿ ತಲುಪಿದ ಸಾಧನೆ ಮಾಡಿದೆ.
ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದ್ದ ಸ್ಥಳೀಯ ಶಾಸಕ ವಿಶ್ವಜೀತ್ ಕದಮ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸಾಂಗ್ಲಿಯಿಂದ ಸ್ಪರ್ಧಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ವಸಂತ್ ದಾದಾ ಪಾಟೀಲ್ ಅವರ ಮೊಮ್ಮಗ ವಿಶಾಲ್ ಪಟೇಲ್ ಜಯ ಗಳಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ವಿಶಾಲ್ ಪಟೇಲ್ ಬೆಂಬಲ ವ್ಯಕ್ತಪಡಿಸಿ ಪಕ್ಷಕ್ಕೆ ಮರಳಿದ್ದಾರೆ. ಇದರಿಂದ ಕಾಂಗ್ರೆಸ್ ಶತಕ ಬಾರಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವಿಶೇಷ ಅಂದರೆ ಕಾಂಗ್ರೆಸ್ ಪಕ್ಷ 10 ವರ್ಷ ಕಳೆದರೂ 100 ಸ್ಥಾನ ಗೆಲ್ಲಲು ಸಾಧ್ಯವಿಲ್ಲ ಎಂದು ಎನ್ ಡಿಎ ಸಭೆಯಲ್ಲಿ ಹೇಳಿಕೆ ನೀಡಿದ ಸಮಯದಲ್ಲೇ ಬಂಡಾಯ ಅಭ್ಯರ್ಥಿಯಾಗಿ ಗೆದ್ದ ವಿಶಾಲ್ ಸೇರ್ಪಡೆಯಿಂದ ಕಾಂಗ್ರೆಸ್ 100ರ ಗಡಿ ದಾಟಿತು.