Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಮನರಂಜನೆ

ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ: ಸೂರ್ಯನಿಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ, ಬೇಗ ಬರ್ತಿನಿ ಚಿನ್ನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
devil kannada movie trailer

ಚಾಲೆಂಜಿಂಗ್​ ಸ್ಟಾರ್ ದರ್ಶನ್​ ತೂಗುದೀಪ ನಟಿಸಿ, ಮಿಲನ ಖ್ಯಾತಿಯ ಪ್ರಕಾಶ್ ನಿರ್ದೇಶನ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ಹೊಸ ದಾಖಲೆ ಬರೆದಿದೆ.

ಮುಂದಿನ ವಾರ ಬಿಡುಗಡೆ ಆಗಲಿರುವ ಡೆವಿಲ್ ಚಿತ್ರದ ಟ್ರೇಲರ್ ಶುಕ್ರವಾರ ಬೆಳಿಗ್ಗೆ ಬಿಡುಗಡೆ ಆಗಿದ್ದು, ಕೆಲವೇ ಗಂಟೆಗಳಲ್ಲಿ 30 ಲಕ್ಷ ವೀಕ್ಷಣೆ ಆಗಿದೆ. ಟ್ರೇಲರ್ ಅದ್ಧೂರಿಯಾಗಿ ಮೂಡಿಬಂದಿದ್ದು, ಸಿನಿಮಾ ಬಗ್ಗೆ ಕುತೂಹಲ ಮೂಡಿಸುವಲ್ಲಿ ಯಶಸ್ವಿಯಾಗಿದೆ.

ಟ್ರೇಲರ್ ಕೊನೆಯಲ್ಲಿ ದರ್ಶನ್ ಹೇಳುವ ಸೂರ್ಯನಿಗೆ ತುಂಬಾ ಹೊತ್ತು ಗ್ರಹಣ ಹಿಡಿಯಲ್ಲ. ಬೇಗ ಬರ್ತಿನಿ ಚಿನ್ನ ಎಂದ ಡೈಲಾಗ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟ್ರೇಲರ್​​ನ ಒಂದೊಂದು ಡೈಲಾಗ್​ ಕೂಡಾ ಸಖತ್ ಪಂಚಿಂಗ್​ ಆಗಿದೆ. ‘ಖೇಲ್​ ಖತಂ, ನಾಟಕ್​ ಬಂದ್, ಎಲ್ಲೋದ್ರೂ ಬರ್ತಿರಲ್ವಾ? ಏನ್​ ನಿಮ್​ ಪ್ರಾಬ್ಲಮ್​​’ ಅನ್ನೋದು ಆ ಡೈಲಾಗ್​ಗಳಲ್ಲೊಂದು. ದಾಸನ ಸ್ವಾಗ್​​ಗೆ ಫ್ಯಾನ್ಸ್​ ದಿಲ್​ ಖುಷ್​ ಆಗಿದ್ದಾರೆ.

ಚಾಲೆಂಜಿಂಗ್​ ಸ್ಟಾರ್ ಕೊನೆಯದಾಗಿ ಕಾಣಿಸಿಕೊಂಡ ಚಿತ್ರ ‘ಕಾಟೇರ’. 2023ರ ಡಿಸೆಂಬರ್​ 29ರಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾದ ಈ ಚಿತ್ರ ಯಶಸ್ವಿಯಾಗಿದೆ.

ದರ್ಶನ್​​ ಬಣ್ಣ ಹಚ್ಚಿದ ‘ದಿ ಡೆವಿಲ್’ 2024ರ ಡಿಸೆಂಬರ್​​​ನಲ್ಲೇ ತೆರೆಕಾಣಬೇಕಿತ್ತು. ಆದ್ರೆ, ​ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು ನಾಯಕ ನಟ ಜೈಲು ಸೇರಿದ ಹಿನ್ನೆಲೆ, ಸಿನಿಮಾ ವಿಳಂಬ ಎದುರಿಸಿತು.

ಜಾಮೀನಿನ ಮೇಲೆ ಹೊರಗಿದ್ದ ಕೆಲ ದಿನಗಳಲ್ಲಿ ದರ್ಶನ್​​​​, ಉಳಿದಿರುವ ತಮ್ಮ ಚಿತ್ರೀಕರಣವನ್ನು ಪೂರ್ಣಗೊಳಿಸಿಕೊಟ್ಟರು. ಇದೀಗ ಸಿನಿಮಾ ಬಿಡುಗಡೆ ಹಂತಕ್ಕೆ ಬಂದು ನಿಂತಿದೆ. ನಾಯಕ ನಟ ದರ್ಶನ್​ ಅನುಪಸ್ಥಿತಿಯಲ್ಲಿ ಚಿತ್ರತಂಡ ಪ್ರಚಾರ ನಡೆಸುತ್ತಿದೆ. ಇಂದು ಟ್ರೇಲರ್​ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment