ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಹೊತ್ತಿ ಉರಿದಿದ್ದರಿಂದ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನಗೊಂಡ ಭೀಕರ ಘಟನೆ ಧಾರವಾಡದಲ್ಲಿ ಸಂಭವಿಸಿದೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಮುರುಗೋಡದ ಸಾಲಿಮಠ, ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.
ಹುಬ್ಬಳ್ಳಿ ಮಾರ್ಗವಾಗಿ ಗದಗಿನತ್ತ ಐ20 ಕಾರು ಹೊರಟಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿನ ರಸ್ತೆ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ. ಕಾರಿನಿಂದ ಹೊರಗೆ ಬರಲಾಗದೇ ಪಂಚಾಕ್ಷರಯ್ಯ ಕಾರಿನೊಳಗೆ ಸಜೀವದಹನಗೊಂಡಿದ್ದಾರೆ.
ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗದಲ್ಲಿರುವ ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಇನ್ಸ್ಪೆಕ್ಟರ್ ಸಾಲಿಮಠ ಹುಬ್ಬಳ್ಳಿ ಮಾರ್ಗವಾಗಿ ತಮ್ಮ ಕಾರಿನಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸಂಜೆ ಸುಮಾರು 5ಕ್ಕೆ ಹಾವೇರಿಯಿಂದ ಗದಗ ಕಡೆಗೆ ಹೊರಟಿದ್ದರು. ಈ ವೇಳೆ ಭದ್ರಾಪುರ ಹಾಗೂ ಅಣ್ಣಿಗೇರಿ ಬಳಿ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಸಭಸದಿಂದ ಕಾರು 15 ಮೀಟರ್ ಕೆಳಗೆ ಹೋಗಿದೆ. ಬಳಿಕ ಪೆಟ್ರೋಲ್ ಟ್ಯಾಂಕ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಚಾಕ್ಷರಯ್ಯ ಅವರು ಅಲ್ಲಿಯೇ ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಕಾರಿನಲ್ಲಿ ಅವರೊಬ್ಬರೇ ಇದ್ದು, ಅವರೇ ಕಾರು ಚಲಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಮುರುಗೋಡದ ಸಾಲಿಮಠ, ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ.
ಮದುವೆ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡ ಲೋಕಾಯುಕ್ತ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರು ಸಂಜೆ ಸುಮಾರು 5ಕ್ಕೆ ಹಾವೇರಿಯಿಂದ ಗದಗ ಕಡೆಗೆ ಹೊರಟಿದ್ದರು. ಈ ವೇಳೆ ಭದ್ರಾಪುರ ಹಾಗೂ ಅಣ್ಣಿಗೇರಿ ಬಳಿ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಸಭಸದಿಂದ ಕಾರು 15 ಮೀಟರ್ ಕೆಳಗೆ ಹೋಗಿದೆ. ಬಳಿಕ ಪೆಟ್ರೋಲ್ ಟ್ಯಾಂಕ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಚಾಕ್ಷರಯ್ಯ ಅವರು ಅಲ್ಲಿಯೇ ಮೃತಪಟ್ಟಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಸಹ ಆಗಮಿಸಿದ್ದು, ಪೊಲೀಸರು ಮೃತದೇಹವನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಘಟನೆಯಲ್ಲಿ ಪಂಚಾಕ್ಷರಯ್ಯ ಸಾಲಿಮಠ ಸಂಪೂರ್ಣ ಸುಟ್ಟುಹೋದ್ದು ಪತ್ತೆ ಹಚ್ಚಲಾಗದ ಸ್ಥಿತಿಯಲ್ಲಿರುವ ಅವರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ಗೆ ಕಳಿಸಿದ್ದಾರೆ.



