ರೈತರ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ ಮೆಕ್ಕೆಜೋಳ ಖರೀದಿ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಪ್ರತಿ ರೈತನಿಂದ ಬೆಂಬಲ ಬೆಲೆ 2,400.00 ರೂ.ಯಂತೆ ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಖರೀದಿ ಆದೇಶ ನೀಡಿತ್ತು. ಭಾನುವಾರ ಅಧಿಸೂಚನೆ ಹೊರಡಿಸಿದ ರಾಜ್ಯ ಸರ್ಕಾರ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡಿದೆ.
ರಾಜ್ಯ ಸರ್ಕಾರ ಈ ಬಾರಿ ಭಾರೀ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುವ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ ಅವಕಾಶ ಕಲ್ಪಿಸಿದೆ.
FRUITS ತಂತ್ರಾಂಶದಲ್ಲಿ ನೋಂದಾಯಿತವಾಗಿರುವ ರೈತರ ಜಮೀನು ವಿಸ್ತೀರ್ಣದ ಆಧಾರದ ಮೇಲೆಯೇ ಈ ಗರಿಷ್ಠ ಮಿತಿ ನಿಗದಿಪಡಿಸಲಾಗುತ್ತದೆ. ಇರ ಜೊತೆಗೆ, ಡಿಸ್ಟಿಲರಿಗಳ ಸಮೀಪದಲ್ಲಿರುವ PACS (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು) ಮೂಲಕ ಖರೀದಿಗೆ ಆದ್ಯತೆ ನೀಡಲಾಗುವುದು ಎಂದು ತಿದ್ದುಪಡಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ರೈತರು ಹಾಗೂ ರೈತ ಸಂಘಟನೆಗಳ ಮನವಿಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ಸಾವಿರಾರು ಮೆಕ್ಕೆಜೋಳ ಬೆಳೆಗಾರ ರೈತರಿಗೆ ನೇರ ಲಾಭವಾಗಲಿದ್ದು, ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿಯಿಂದ ರಕ್ಷಣೆ ದೊರೆಯಲಿದೆ ಎಂದು ರೈತ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ತಿದ್ದುಪಡಿ ಆದೇಶವನ್ನು ಎಲ್ಲ PACS, ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ತಕ್ಷಣ ಜಾರಿಗೆ ತರಬೇಕೆಂದು ಸರ್ಕಾರ ಸೂಚಿಸಿದೆ.


