Wednesday, December 24, 2025
Google search engine
Homeದೇಶಮುಸ್ಲಿಮರ ಓಲೈಕೆಗಾಗಿ ವಂದೇ ಮಾತರಂ ಗೀತೆಗೆ ಕತ್ತರಿ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಕಿಡಿ

ಮುಸ್ಲಿಮರ ಓಲೈಕೆಗಾಗಿ ವಂದೇ ಮಾತರಂ ಗೀತೆಗೆ ಕತ್ತರಿ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಕಿಡಿ

ನವದೆಹಲಿ: ಮುಸ್ಲಿಮರ ಓಲೈಕೆಗಾಗಿ ವಂದೇ ಮಾತರಂ ಗೀತೆಯನ್ನು ಕಾಂಗ್ರೆಸ್ ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಂದೇ ಮಾತರಂ ಗೀತೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಸೋಮವಾರ ಚರ್ಚೆ ಆರಂಭಿಸಿದ ಅವರು, ವಂದೇ ಮಾತರಂ ವಿರುದ್ದ ಜಿನ್ನಾ ನಡೆಸಿದ ಪ್ರತಿಭಟನೆಯನ್ನು ನೆಹರು ಬೆಂಬಲಿಸಿದರು. ಕೊನೆಗೆ ಕಾಂಗ್ರೆಸ್ ಮುಸ್ಲಿಂ ಲೀಗ್‌ ಗೆ ತಲೆಬಾಗಿ ಗೀತೆಗೆ ಕತ್ತರಿ ಹಾಕಿದರು ಎಂದರು.

ವಂದೇ ಮಾತರಂ ವಿರುದ್ಧ ಮುಸ್ಲಿಂ ಲೀಗ್ ಅವರಿಗೆ ಪತ್ರ ಬರೆದು ಆಕ್ಷೇಪ ವ್ಯಕ್ತಪಡಿಸಿತು. ಮೊಹಮ್ಮದ್ ಅಲಿ ಜಿನ್ನಾ ಅದರ ವಿರುದ್ಧ ಘೋಷಣೆಗಳನ್ನು ಕೂಗಿದರು. ಆಗಿನ ಕಾಂಗ್ರೆಸ್ ಮುಖ್ಯಸ್ಥ ಜವಾಹರಲಾಲ್ ನೆಹರು ಜಿನ್ನಾ ಹೇಳಿಕೆಗಳನ್ನು ಖಂಡಿಸಲು ಹೋಗದೇ ಬೇಡಿಕೆಗೆ ಮಣಿದು 5 ದಿನದಲ್ಲೇ ಪರಿಶೀಲನೆಗೆ ಮುಂದಾದರು ಎಂದು ಅವರು ಹೇಳಿದರು.

ಜಿನ್ನಾ ವಂದೇ ಮಾತರಂಗೆ ವಿರೋಧ ವ್ಯಕ್ತಪಡಿಸಿದ ನಂತರ ಪಂಡಿತ್ ಜವಾಹರಲಾಲ್ ನೆಹರು ತಮ್ಮ ಮತ್ತು ಪಕ್ಷದ ನಿಷ್ಠೆಯನ್ನು ವ್ಯಕ್ತಪಡಿಸುವ ಬದಲು ಸುಭಾಷ್ ಚಂದ್ರ ಬೋಸ್ ಅವರಿಗೆ ಪತ್ರ ಬರೆದು, ವಂದೇ ಮಾತರಂನ ಹಿನ್ನೆಲೆಯನ್ನು ತಾವು ಓದಿರುವುದಾಗಿ ಮತ್ತು ಅದು ಮುಸ್ಲಿಮರನ್ನು ಕೆರಳಿಸಬಹುದು ಮತ್ತು ಕಿರಿಕಿರಿಯಾಗಬಹುದು ಎಂದು ಭಾವಿಸಿರುವುದಾಗಿ ಹೇಳಿದರು.

ವಂದೇ ಮಾತರಂ ಪರಿಶೀಲನೆಗೆ ಒಳಪಡಿಸಿದ ನಂತರ ದೇಶದ ದುರ್ಭಾಗ್ಯ ಎಂಬಂತೆ ಕಾಂಗ್ರೆಸ್ ಮುಸ್ಲಿಂ ಲೀಗ್‌ ಒತ್ತಡಕ್ಕೆ ತಲೆಬಾಗಿ ಹಾಡನ್ನು ಕತ್ತರಿಸಿತು. ಕಾಂಗ್ರೆಸ್ ತುಷ್ಟೀಕರಣದ ಒತ್ತಡದಲ್ಲಿ ವಂದೇ ಮಾತರಂ ಅನ್ನು ವಿಭಜಿಸಿತು ಎಂದು ಕಿಡಿಕಾರಿದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments