ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 900 ದಾಟಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ಏಷ್ಯಾದ ದೇಶವಾದ ಇಂಡೋನೇಷ್ಯಾದಲ್ಲಿ ಕಳೆದ ವಾರ ಭೀಕರ ಚಂಡಮಾರುತದಿಂದ ಕಾಣಿಸಿಕೊಂಡ ಪ್ರವಾಹದಿಂದ ದೇಶದ ಹಲವು ಕಡೆ ಭೂಕುಸಿತ, ಕಟ್ಟಡಗಳು ನೆಲಸಮಗೊಂಡಿವೆ.
ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ 1 ಲಕ್ಷಕ್ಕೂ ಅಧಿಕ ನಾಗರಿಕರು ಮನೆಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಹವಾಮಾನ ಬದಲಾವಣೆಯಿಂದ ಏಷ್ಯಾದ ರಾಷ್ಟ್ರಗಳಲ್ಲಿ ಸಂಭವಿಸಿದ ಪ್ರಕೃತಿ ದುರಂತದಿಂದ ಶ್ರೀಲಂಕಾ, ಥಾಯ್ಲೆಂಡ್, ಮಲೇಷ್ಯಾ, ವಿಯೆಟ್ನಾಂ ಸೇರಿದಂತೆ ಹಲವು ದೇಶಗಳಲ್ಲಿ ಒಟ್ಟಾರೆ 2000ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.
ಇಂಡೋನೇಷ್ಯಾದಲ್ಲಿ 300 ಕುಟುಂಬಗಳು ವಾಸಿಸುತ್ತಿದ್ದ ಒಂದು ಗ್ರಾಮದ ಶೇ.90ರಷ್ಟು ಮನೆಗಳು ಕೊಚ್ಚಿ ಹೋಗಿವೆ.


