Wednesday, December 24, 2025
Google search engine
Homeರಾಜ್ಯಬೆಳಗಾವಿಯಲ್ಲಿ ವಿಶ್ವದ 2ನೇ ಅತೀ ಉದ್ದದ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದ ಸಿಎಂ!

ಬೆಳಗಾವಿಯಲ್ಲಿ ವಿಶ್ವದ 2ನೇ ಅತೀ ಉದ್ದದ ಖಾದಿ ತ್ರಿವರ್ಣ ಧ್ವಜ ಅನಾವರಣಗೊಳಿಸಿದ ಸಿಎಂ!

ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಬೆಳಗಾವಿ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಸಿಎಂ ಸಿದ್ದರಾಮಯ್ಯ 75 ಅಡಿ ಉದ್ದ ಹಾಗೂ 55 ಅಡಿ ಅಗಲದ ವಿಶಾಲ ಧ್ವಜನವನ್ನು ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು, ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ,  ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ನೋಡುಗರಲ್ಲಿ ದೇಶಭಕ್ತಿಯ ಸುಂದರ ಭಾವನೆಗಳನ್ನು ಬಿತ್ತಲಿದೆ ಎಂದರು.

ಇಂತಹ ಮಹತ್ವದ ಧ್ವಜದ ನಿರ್ಮಾಣಕ್ಕೆ ಶ್ರಮಿಸಿದ ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದಕುಮಾರ ರೇವಪ್ಪ ಬಮ್ಮಣ್ಣವರ ಹಾಗೂ ಅವರ ಕುಟುಂಬ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರನ್ನು ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ರಾಷ್ಟ್ರಭಕ್ತಿ ಸಾರುವ ಸಂದೇಶ

ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು.ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ವಿವರಿಸಿದರು.

ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು

ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು. ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು  ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.

ನಾವೆಲ್ಲರೂ ಜಾತ್ಯತೀತರಾಗಬೇಕು

ನಾವೆಲ್ಲರೂ  ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಜಾ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.

ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಎಷ್ಟರಮಟ್ಟಿಗೆ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ, ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.

ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮ

ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಶಾಲಾ ಕಾಲೇಜುಗಳಲ್ಲಿ ಓದಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಅದಕ್ಕಾಗಿಯೇ ಇಂಥ ಐತಿಹಾಸಿಕ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರು ಕೊಟ್ಟಿರುವ ರಾಷ್ಟ್ರಧ್ವಜಕ್ಕಾಗಿ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments