Saturday, July 11, 2026
Google search engine
Homeಬೆಂಗಳೂರುಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ನಾನ ಮಾಡುತ್ತಿದ್ದ ತಾಯಿ-ಮಗಳ ಸಾವು

ಗ್ಯಾಸ್ ಗೀಸರ್ ಸೋರಿಕೆಯಾಗಿ ಸ್ನಾನ ಮಾಡುತ್ತಿದ್ದ ತಾಯಿ-ಮಗಳ ಸಾವು

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ತಾಯಿ-ಮಗಳು ಇಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಗೋವಿಂದರಾಜನಗರದಲ್ಲಿ ಸಂಭವಿಸಿದೆ.

ಗೋವಿಂದರಾಜನಗರದ ಚಾಂದಿನಿ (26) ಹಾಗೂ ಅವರ ಪುತ್ರಿ ಯುವಿ (4) ಎಂದು ಮೃತಪಟ್ಟವರು. ಸೋಮವಾರ ಮಧ್ಯಾಹ್ನ ಇಬ್ಬರು ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್‌ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪ್ರತಿದಿನ ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ನಿನ್ನೆ ಮಗಳನ್ನು ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯಿಂದ ಚಾಂದಿನಿ ಪತಿ ಕಿರಣ್‌ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.

ಕಿರಣ್ ತಮ್ಮ ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್‌ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಗೊತ್ತಾಗಿದೆ. ಗ್ಯಾಸ್ ಗೀಸರ್ ಸೋರಿಕೆಯಿಂದ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಗೋವಿಂದ ರಾಜನಗರ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments