Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ವಂದೇ ಮಾತರಂ ವಿರೋಧಿಸಿದವರೇ ಬೇರೆಯವರನ್ನು ನಿಂದಿಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ತಿರುಗೇಟು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
mallikarjun kharge

ಬ್ರಿಟಿಷರ ಜೊತೆ ಕೈ ಜೋಡಿಸಿ ವಂದೇ ಮಾತರಂ ವಿರೋಧಿಸಿದವರೇ ಇಂದು ನಮ್ಮನ್ನು ತೆಗಳುತ್ತಿದ್ದಾರೆ ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ತಿರುಗೇಟು ನೀಡಿದ್ದಾರೆ.

ವಂದೇ ಮಾತರಂ ಕುರಿತು ನಡೆದ ಚರ್ಚೆಯಲ್ಲಿ ಮಂಗಳವಾರ ರಾಜ್ಯಸಭೆಯಲ್ಲಿ ಸುದೀರ್ಘ ಭಾಷಣ ಮಾಡಿದ ಅವರು, ವಂದೇ ಮಾತರಂ ವಿರೋಧಿಸಿದ ಬಿಜೆಪಿ ನಾಯಕರು ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರನ್ನು ನಿಂದಿಸುತ್ತಿದ್ದಾರೆ ಎಂದರು.

ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರವನ್ನು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್‌ರಂತಹ ನಾಯಕರು ಸಾಮೂಹಿಕವಾಗಿ ತೆಗೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ಹಾಡನ್ನು ಕಾಂಗ್ರೆಸ್ ‘ವಿಭಜಿಸಿದೆ’ ಎಂದು ಆಡಳಿತಾರೂಢ ಬಿಜೆಪಿ ಆರೋಪ ಮಾಡುತ್ತಿದ್ದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ,ಕಾಂಗ್ರೆಸ್ ನಾಯಕರು ಯಾವಾಗಲೂ ‘ವಂದೇ ಮಾತರಂ’ ಹಾಡುತ್ತಿದ್ದಾರೆ ಎಂದು ಹೇಳಿದರು.

ಕವಿತೆಯ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರದ ಹಿಂದೆ ತುಷ್ಟೀಕರಣ ರಾಜಕೀಯವಿದೆ. ವಂದೇ ಮಾತರಂ ಗೀತೆಗೆ ಕತ್ತರಿ ಹಾಕಿದ್ದು ದೇಶದ ವಿಭಜನೆಗೆ ಕಾರಣವಾಯ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದರು.

ಇಂದು ‘ವಂದೇ ಮಾತರಂ’ ಘೋಷಣೆ ಕೂಗುತ್ತಾ ತಮ್ಮ ಭಾಷಣವನ್ನು ಆರಂಭಿಸಿದ ಖರ್ಗೆ, “ನಾವು ಯಾವಾಗಲೂ ವಂದೇ ಮಾತರಂ ಹಾಡುತ್ತಲೇ ಇದ್ದೇವೆ. ಆದರೆ ವಂದೇ ಮಾತರಂ ಹಾಡದವರು ಈಗ ಅದನ್ನು ಹಾಡಲು ಪ್ರಾರಂಭಿಸಿದ್ದಾರೆ. ಅದು ವಂದೇ ಮಾತರಂನ ಶಕ್ತಿ. ಇದು ರಾಷ್ಟ್ರೀಯ ಹಬ್ಬ, ಚರ್ಚೆಯಲ್ಲ ಎಂದರು.

“1921 ರಲ್ಲಿ ಅಸಹಕಾರ ಚಳುವಳಿ ಪ್ರಾರಂಭವಾದಾಗ, ಕಾಂಗ್ರೆಸ್ ಸದಸ್ಯರು ವಂದೇ ಮಾತರಂ ಜಪಿಸುತ್ತಾ ಜೈಲಿಗೆ ಹೋಗುತ್ತಿದ್ದರು. ನೀವು ಏನು ಮಾಡಿದ್ದೀರಿ? ನೀವು ಬ್ರಿಟಿಷರಿಗಾಗಿ ಕೆಲಸ ಮಾಡುತ್ತಿದ್ದೀರಿ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment