ಬಾಂಬ್ ನಿಷ್ಕ್ರಿಯ ದಳ ಶ್ವಾನ ದಳ ಇದ್ದ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪೊಲೀಸರು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಬುಧವಾರ ಸಂಭವಿಸಿದೆ.
ಸಾಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ನಾಲ್ವರು ಪೊಲೀಸರು ಮೃತಪಟ್ಟಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ. ಶ್ವಾನದ ದಳ ಪವಾಡ ಸದೃಶವಾಗಿ ಪಾರಾಗಿದೆ.
ಬಾಂದ್ರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕಾಮಗಾರಿ ನಡೆಯುತ್ತಿದ್ದರಿಂದ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿತ್ತು. ಆದರೆ ಇದರ ಅರಿಲ್ಲದೇ ಎರಡೂ ವಾಹನಗಳು ವೇಗವಾಗಿ ಸಂಚರಿಸುತ್ತಿದ್ದರಿಂದ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಅಲರ್ಟ್ ಎಂಬ ಸಂದೇಶ ಬಂದ ಹಿನ್ನೆಲೆಯಲ್ಲಿ ನಕ್ಸಲರ ವಿರುದ್ಧ ಬಾಲಘಾಟ್ ನಲ್ಲಿ ಕಾರ್ಯಾಚರಣೆಗೆ ವಾಹ ತೆರಳಿದ್ದು, ಮೊರನಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ದುರಂತದಲ್ಲಿ ಗಂಭೀವಾಗಿ ಗಾಯಗೊಂಡ ಪೊಲೀಸ್ ಪೇದೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ನಂತರ ಕೂಡಲೇ ಏರ್ ಲಿಫ್ಟ್ ಮೂಲಕ ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಯಿತು.


