Wednesday, December 24, 2025
Google search engine
Homeರಾಜ್ಯ2.85 ಲಕ್ಷ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ ಭರವಸೆ

2.85 ಲಕ್ಷ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಳಗಾವಿ: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ನಲ್ಲಿ ಗುರುವಾರ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ನಿಗಮ ಮಂಡಳಿಗಳು ಸೇರಿದಂತೆ ಸುಮಾರು 2,84,881 ಹುದ್ದೆಗಳು ಖಾಲಿಯಿದ್ದು,ಇವುಗಳನ್ನು ಶೀಘ್ರ ಗತಿಯಲ್ಲಿ ತುಂಬಲು ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಕೋರಿದ್ದರು.

ಸರ್ಕಾರದಲ್ಲಿ ವಿವಿಧ ಇಲಾಖೆಗಳೂ  ಸೇರಿದಂತೆ ರಾಜ್ಯದಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಕ್ರೀಡಾಪಟುಗಳಿಗೆ ನೇಮಕಾತಿ ಮೀಸಲಾತಿ

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ  ಇಲಾಖೆಗಳಲ್ಲಿ ಶೇ. 2 ರಷ್ಟು  ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.

ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ಟೇಬಲ್ ಗಳಿಗೆ ನೇರ ನೇಮಕಾತಿ  ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ  ಇಲಾಖೆಗಳಲ್ಲಿ ಶೇ. 2 ರಷ್ಟು  ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments