Wednesday, December 24, 2025
Google search engine
Homeದೇಶಕೇಂದ್ರ ಕೇಂದ್ರ ಸಚಿವ, ಲೋಕಸಭಾ ಸ್ಪೀಕರ್ ಶಿವರಾಜ್ ಸಿಂಗ್ ನಿಧನ

ಕೇಂದ್ರ ಕೇಂದ್ರ ಸಚಿವ, ಲೋಕಸಭಾ ಸ್ಪೀಕರ್ ಶಿವರಾಜ್ ಸಿಂಗ್ ನಿಧನ

ಕೇಂದ್ರ ಮಾಜಿ ಗೃಹ ಸಚಿವ ಹಾಗೂ ಲೋಕಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಿವರಾಜ್ ಪಾಟೀಲ್ ವಯೋ ಸಹಜ ಅನಾರೋಗ್ಯದಿಂದ ನಿಧನರಾಗಿದ್ದು, ಅವರಿಗೆ 90 ವರ್ಷ ವಯಸ್ಸಾಗಿತ್ತು.

ಮಹಾರಾಷ್ಟ್ರದ ಲಾತೂರ್‌ನ ತಮ್ಮ ನಿವಾಸದಲ್ಲಿ ಶುಕ್ರವಾರ ಅಸುನೀಗಿದರು.

ಸುದೀರ್ಘ ಕಾಲ ರಾಜಕೀಯವಾಗಿ ಸಕ್ರಿಯರಾಗಿದ್ದ ಶಿವರಾಜ್ ಪಾಟೀಲ್ ಲೋಕಸಭೆಯ ಸ್ಪೀಕರ್ ಆಗಿಯೂ ಕೆಲಸ ಮಾಡಿದವರು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದರು. ಲಾತೂರ್ ಲೋಕಸಭಾ ಕ್ಷೇತ್ರದಿಂದ 7 ಬಾರಿ ಗೆದ್ದು ದಾಖಲೆ ನಿರ್ಮಿಸಿದ್ದ ಶಿವರಾಜ್ ಪಾಟೀಲ್ ರಕ್ಷಣಾ ಸಚಿವರು, ಗೃಹ ಸಚಿವರು ಮತ್ತು ಪಂಜಾಬ್ ರಾಜ್ಯಪಾಲರು ಸೇರಿದಂತೆ ಹಲವು ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಲಾತೂರ್ ಜಿಲ್ಲೆಯ ಚಾಕೂರ್ ಗ್ರಾಮದಲ್ಲಿ ಅಕ್ಟೋಬರ್ 12, 1935 ರಂದು ಜನಿಸಿದ ಶಿವರಾಜ್ ಪಾಟೀಲ್ ಲಾತೂರ್ ಲೋಕಸಭಾ ಕ್ಷೇತ್ರದಿಂದ ಏಳು ಬಾರಿ ಗೆದ್ದರು. 2004 ರಲ್ಲಿ ಸೋಲಿನ ನಂತರ ರಾಜ್ಯಸಭೆಯ ಮೂಲಕ ಕೇಂದ್ರ ರಾಜಕೀಯಕ್ಕೆ ಮರಳಿದರು ಮತ್ತು 2004 ರಿಂದ 2008 ರವರೆಗೆ ಕೇಂದ್ರ ಗೃಹ ಸಚಿವ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು.

ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸಚಿವ ಸಂಪುಟಗಳಲ್ಲಿ ರಕ್ಷಣಾ ಸಚಿವರಾಗಿ ಪ್ರಮುಖ ಪಾತ್ರ ವಹಿಸಿದ್ದರು. 1991 ರಿಂದ 1996 ರವರೆಗೆ ಲೋಕಸಭೆಯ 10 ನೇ ಸ್ಪೀಕರ್ ಆಗಿದ್ದರು. 2010 ರಿಂದ 2015 ರವರೆಗೆ ಪಂಜಾಬ್ ರಾಜ್ಯಪಾಲರಾಗಿ ಮತ್ತು ಚಂಡೀಗಢದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments