2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ದೇಶಾದ್ಯಂತ 5 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಇಲ್ಲ. ಹೊಸ ವಿದ್ಯಾರ್ಥಿಗಳ ನೋಂದಣಿಯಂತೂ ಆಗಿಯೇ ಇಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಹೇಳಿದೆ.
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಗುರುವಾರ ನೀಡಿದ ಮಾಹಿತಿ ಪ್ರಕಾರ ದೇಶಾದ್ಯಂತ 10.13 ಲಕ್ಷ ಸರ್ಕಾರಿ ಶಾಲೆಗಳಿವೆ. ಇದರಲ್ಲಿ 5149 ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿಯೂ ಇಲ್ಲ.
ಸರ್ಕಾರಿ ಶಾಲೆಗಳಿಗೆ ಹೊಸ ವಿದ್ಯಾರ್ಥಿಗಳು ಬಾರದೇ ಇರುವುದು ಶೈಕ್ಷಣಿಕ ವ್ಯವಸ್ಥೆಯ ಬಗ್ಗೆ ಕಳವಳ ಮೂಡಿಸುವಂತಿದೆ. ವಿದ್ಯಾರ್ಥಿಗಳೇ ಇಲ್ಲದ ಸರ್ಕಾರಿ ಶಾಲೆಗಳ ಪೈಕಿ ಶೇ.70ರಷ್ಟು ಶಾಲೆಗಳು ತೆಲಂಗಾಣ ಮತ್ತುಪಶ್ಚಿಮ ಬಂಗಾಳದಲ್ಲಿ ಇವೆ.
ಸರ್ಕಾರಿ ಶಾಲೆಗಳನ್ನು ತೊರೆಯುತ್ತಿರುವುದು ಏಕೆ ಎಂಬ ಪ್ರಶ್ನೆ ಕಾಡುತ್ತಿದೆ. ವಾಯುಮಾಲಿನ್ಯ, ಶಾಲೆಯಿಂದ ದೂರ ಮನೆ, ಪೋಷಕರು ಸ್ಥಳಾಂತರ ಸೇರಿದಂತೆ ಹಲವು ವಿಷಯಗಳ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಕೇಂದ್ರ ಹೇಳಿದೆ.
ಸರ್ಕಾರಿ ಶಾಲೆಗಳು ಶೂನ್ಯ ವಿದ್ಯಾರ್ಥಿಗಳ ಸಂಖ್ಯೆ ಪಶ್ಚಿಮ ಬಂಗಾಳ ಮತ್ತು ತೆಲಂಗಾಣದಲ್ಲಿ ಮಾತ್ರ ಶೇ.70ರಷ್ಟು ಇರುವುದು ಕೂಡ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.


