Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಹರಿಣಗಳನ್ನು ಬೇಟೆಯಾಡಿ ಸತತ 10 ಗೆಲುವಿನ ದಾಖಲೆ ಬರೆದ ಟೀಂ ಇಂಡಿಯಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು
india team

ತಿಲಕ್‌ ವರ್ಮಾ, ಹಾರ್ದಿಕ್‌ ಪಾಂಡ್ಯ ಸಿಡಿಲಬ್ಬರದ ಅರ್ಧಶತಕ ಹಾಗೂ ವರುಣ್‌ ಚಕ್ರವರ್ತಿ ಮಾರಕ ದಾಳಿ ಸಹಾಯದಿಂದ ಭಾರತ ತಂಡ 30 ರನ್‌ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ 3-1ರಿಂದ 5 ಪಂದ್ಯಗಳ ಟಿ-20 ಸರಣಿಯನ್ನು ಗೆದ್ದು ತವರಿನಲ್ಲಿ ಸತತ 10 ಸರಣಿ ಗೆದ್ದ ದಾಖಲೆ ಬರೆಯಿತು.

ಅಹಮದಾಬಾದ್‌ ಮೈದಾನದಲ್ಲಿ ಶುಕ್ರವಾರ ನಡೆದ 5ನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಭಾರತ ತಂಡ 20 ಓವರ್‌ ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 213 ರನ್‌ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ ಉತ್ತಮ ಆರಂಭದ ಹೊರತಾಗಿಯೂ ನಾಟಕೀಯ ಕುಸಿತ ಕಂಡು 20 ಓವರ್‌ ಗಳಲ್ಲಿ 8 ವಿಕೆಟ್‌ ಗೆ 201 ರನ್‌ ಗಳಿಸಲಷ್ಟೇ ಶಕ್ತವಾಯಿತು.

ಈ ಗೆಲುವಿನೊಂದಿಗೆ ಭಾರತ ಸತತ 10 ಸರಣಿ ಗೆದ್ದ ದಾಖಲೆ ಬರೆದರೆ, 14 ಸರಣಿಗಳಲ್ಲಿ ಸೋಲದ ದಾಖಲೆ ಬರೆಯಿತು.

ದಕ್ಷಿಣ ಆಫ್ರಿಕಾ ಒಂದು ಹಂತದಲ್ಲಿ 1 ವಿಕೆಟ್‌ ಕಳೆದುಕೊಂಡು 118 ರನ್‌ ಗಳಿಸಿ ಸುಲಭ ಗೆಲುವಿನತ್ತ ಮುಖ ಮಾಡಿತ್ತು. ಕ್ವಿಂಟನ್‌ ಡಿಕಾಕ್‌ ಮತ್ತು ಡೆವ್ಲಾಡ್‌ ಬ್ರೇವಿಸ್‌ ಉತ್ತಮ ಪ್ರದರ್ಶನ ನೀಡಿದರು.

ಕ್ವಿಂಟನ್‌ ಡಿಕಾಕ್‌ 35 ಎಸೆತಗಳಲ್ಲಿ 9 ಬೌಂಡರಿ ಮತ್ತು ೩ ಸಿಕ್ಸರ್‌ ಒಳಗೊಂಡ 65 ರನ್‌ ಸಿಡಿಸಿದರೆ ಬ್ರೇವಿಸ್‌ 17 ಎಸೆತಗಳಲ್ಲಿ 3 ಬೌಂಡರಿ ಮತ್ತು 2 ಸಿಕ್ಸರ್‌ ಸಹಾಯದಿಂದ 31 ರನ್‌ ಗಳಿಸಿದರು. ಇವರಿಬ್ಬರು ನಿರ್ಗಮಿಸುತ್ತಿದ್ದಂತೆ ತಂಡ ನಾಟಕೀಯ ಕುಸಿತಕ್ಕೆ ಒಳಗಾಯಿತು.

ಡೇವಿಡ್‌ ಮಿಲ್ಲರ್‌ (18), ಜಾರ್ಜ್‌ ಲಿಂಡೆ (16), ಮಾರ್ಕೊ ಜಾನ್ಸೆನ್‌ (14), ಕಾರ್ಬಿನ್‌ ಬೊಶ್‌ (17) ಹೋರಾಟ ಸಾಕಾಗಲಿಲ್ಲ. ಭಾರತದ ಪರ ವರುಣ್‌ ಚಕ್ರವರ್ತಿ 53 ರನ್‌ ನೀಡಿ 4 ವಿಕೆಟ್‌ ಪಡೆದು ಮಿಂಚಿದರೆ, ಬುಮ್ರಾ 2 ವಿಕೆಟ್‌ ಪಡೆದು ಗಮನ ಸೆಳೆದರು.

ತಿಲಕ್-ಪಾಂಡ್ಯ ಭರ್ಜರಿ ಜೊತೆಯಾಟ

ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ ಭಾರತ ತಂಡಕ್ಕೆ ಸಂಜು ಸ್ಯಾಮ್ಸನ್‌ (34) ಮತ್ತು ಅಭಿಷೇಕ್‌ ಶರ್ಮ (37) ಮೊದಲ ವಿಕೆಟ್‌ ಗೆ 63 ರನ್‌ ಪೇರಿಸಿ ಮಿಂಚಿನ ಆರಂಭ ನೀಡಿದರು. ಇವರಿಬ್ಬರು ನಿರ್ಗಮಿಸಿದ ನಂತರ ಬಂದ ಸೂರ್ಯಕುಮಾರ್‌ ಯಾದವ್‌ (5) ಮತ್ತೊಮ್ಮೆ ವಿಫಲರಾದರು. ಈ ಮೂಲಕ 2025ರಲ್ಲಿ ಒಂದೂ ಅರ್ಧಶತಕ ಬಾರಿಸದೇ ನಿರಾಸೆ ಅನುಭವಿಸಿದರು.

ನಂತರ ಬಂದ ತಿಲಕ್‌ ವರ್ಮಾ ಮತ್ತು ಹಾರ್ದಿಕ್‌ ಪಾಂಡ್ಯ 105 ರನ್‌ ಜೊತೆಯಾಟದಿಂದ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ತಿಲಕ್‌ ವರ್ಮಾ ೪೨ ಎಸೆತಗಳಲ್ಲಿ 10 ಬೌಂಡರಿ ಮತ್ತು 1 ಸಿಕ್ಸರ್‌ ಒಳಗೊಂಡ 73 ರನ್‌ ಸಿಡಿಸಿದರೆ, ಹಾರ್ದಿಕ್‌ ಪಾಂಡ್ಯ 25 ಎಸೆತಗಳಲ್ಲಿ 5 ಬೌಂಡರಿ ಮತ್ತು ಅಷ್ಟೇ ಸಂಖ್ಯೆಯ ಸಿಕ್ಸರ್‌ ಒಳಗೊಂಡ 63 ರನ್‌ ಚಚ್ಚಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment