Wednesday, December 24, 2025
Google search engine
Homeಬೆಂಗಳೂರುಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ: 6ನೇ ರೈಲು ಸೇರ್ಪಡೆಯಿಂದ ಹಳದಿ ಮಾರ್ಗದಲ್ಲಿ ಸಂಚರಿಸಲಿದ 13 ನಿಮಿಷಕ್ಕೊಂದು ರೈಲು!

ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ: 6ನೇ ರೈಲು ಸೇರ್ಪಡೆಯಿಂದ ಹಳದಿ ಮಾರ್ಗದಲ್ಲಿ ಸಂಚರಿಸಲಿದ 13 ನಿಮಿಷಕ್ಕೊಂದು ರೈಲು!

ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವೆ ಸಂಚರಿಸಲಿರುವ ‘ನಮ್ಮ ಮೆಟ್ರೋ’ದ ಹಳದಿ ಮಾರ್ಗಕ್ಕೆ 6ನೇ ರೈಲು ಸೇರ್ಪಡೆಯಾಗಿದ್ದು, ಡಿಸೆಂಬರ್ 23ರಿಂದ 13 ನಿಮಿಷಕ್ಕೊಂದು ರೈಲು ಸಂಚರಿಸಲಿದೆ.

ಪ್ರಸ್ತುತ ಹಳದಿ ಮಾರ್ಗದಲ್ಲಿ ರೈಲುಗಳು ಪ್ರತಿ 15 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿವೆ. ಈಗ 6ನೇ ರೈಲು ಕಾರ್ಯಾಚರಣೆಗೆ ಇಳಿಯುವುದರಿಂದ 13 ನಿಮಿಷಕ್ಕೊಂದು ರೈಲು ಸಂಚರಿಸಲಿದೆ. ಇದರಿಂದ ಪ್ರಯಾಣಿಕರ ಕಾಯುವಿಕೆ 2 ನಿಮಿಷ ತಗ್ಗಲಿದೆ.

ಭಾನುವಾರಪೀಕ್ ಅವಧಿಯ ಸೇವೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರತಿ 15 ನಿಮಿಷಕ್ಕೊಂದು ರೈಲು ಸಂಚರಿಸುವ ಈಗಿನ ವ್ಯವಸ್ಥೆಯೇ ಮುಂದುವರಿಯಲಿದೆ. ಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ನಿಲ್ದಾಣಗಳ ಎರಡೂ ಟರ್ಮಿನಲ್‌ಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.

ಹಳದಿ ಮಾರ್ಗವು ನಗರದ ಪ್ರಮುಖ ಐಟಿ ಹಬ್‌ಗಳಾದ ಎಲೆಕ್ಟ್ರಾನಿಕ್ ಸಿಟಿಯಂತಹ ಭಾಗಗಳನ್ನು ಸಂಪರ್ಕಿಸುವುದರಿಂದ, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ.

6ನೇ ರೈಲಿನ ಸೇರ್ಪಡೆಯು ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ. ಈ ಬದಲಾವಣೆಯನ್ನು ಗಮನಿಸಿ ಪ್ರಯಾಣಿಕರು ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಬಿಎಂಆರ್ ಸಿಎಲ್ ಮನವಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments