Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಹೊಸ ವರ್ಷಾಚರಣೆಗೆ ಸರ್ಪಗಾವಲು: ಬೆಂಗಳೂರಿನಲ್ಲಿ 20,000 ಪೊಲೀಸರ ನಿಯೋಜನೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
siddaramiah

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಬೆಂಗಳೂರು ಮಹಾ ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪೊಲೀಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಸಭೆಯಲ್ಲಿ ಮುಖ್ಯಮಂತ್ರಿ ನೀಡಿದ ಸೂಚನೆಗಳು

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.

ಮಹಾತ್ಮಾ ಗಾಂಧಿ ರಸ್ತೆ, ಬ್ರಿಗೇಡ್‌ ರೋಡ್‌, ಚರ್ಚ್‌ ಸ್ಟೀಟ್‌, ಕೋರಮಂಗಲ, ಇಂದಿರಾನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆಯಾಗಿ ಯಾವುದೇ ಅನಾಹುತವಾಗದಂತೆ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕು.

ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು ಎಂದರು.

ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್‌ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್‌, 55 ಅಂಬುಲೆನ್ಸ್ ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್‌ ಆಂಡ್‌ ಡ್ರೈವ್‌ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ವಿವರಿಸಿದರು.

ನಗರದಲ್ಲಿರುವ 50 ಫ್ಲೈ ಓವರ್ಗಳಲ್ಲಿ ಹೊಸ ವರ್ಷಾಚರಣೆ ರಾತ್ರಿ ದ್ವಿಚಕ್ರ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುವುದು. ಕಿಡಿಗೇಡಿಗಳ ಮೇಲೆ ನಿರಂತರ ನಿಗಾ ಇರಿಸಬೇಕು. ವ್ಹೀಲಿಂಗ್‌ ಮಾಡುವುದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಮಾದಕ ದ್ರವ್ಯ ಚಟುವಟಿಕೆಗಳ ನಿಯಂತ್ರಣಕ್ಕೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು; ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅವರು ಎಚ್ಚರಿಕೆ ನೀಡಿದರು.

ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್,  ರಾಜ್ಯ ಪೊಲೀಸ್ ಮಹಾನಿರ್ದೇಶಕ  ಡಾ.ಎಂ.ಎ ಸಲೀಂ ,  ಜಿಬಿಎ ಮುಖ್ಯ  ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment