ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಖ್ಯಾತ ಕಿರುತೆರೆ ನಟಿ ನಂದಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ತಮ್ಮ ಮನೆಯಲ್ಲಿ ನಂದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೀವ ಹೂವಾಗಿದೆ. ಸಂಘರ್ಷ ನೀನಾದೆ ನಾ ಸೇರಿದಂತೆ ಹಲವು ಕನ್ನಡದ ಧಾರವಾಹಿಗಳಲ್ಲಿ ನಟಿಸಿದ್ದ ನಂದಿನಿ, ತಮಿಳಿನಲ್ಲಿಯೂ ಹಲವು ಧಾರವಾಹಿಗಳಲ್ಲಿ ನಟಿಸಿದ್ದರು.
ತಮಿಳು ಕಲೈಗ್ನರ್ ಟಿವಿಯಲ್ಲಿ ಪ್ರಸಾರವಾಗುವ ಗೌರಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಗೌರಿ ಧಾರಾವಾಹಿಯಲ್ಲಿ ನಂದಿನಿಯವರು ದುರ್ಗಾ ಮತ್ತು ಕನಕ ಎಂಬ ಎರಡು ಪಾತ್ರವನ್ನು ನಿರ್ವಹಿಸಿಸುತ್ತಿದ್ದರು. ಈ ಸೀರಿಯಲ್ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಹ ಪಡೆದಿತ್ತು.
ನಂದಿನಿ ಅವರ ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ಇನ್ನೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಅವರ ಸಾವು ಈಗ ಅಭಿಮಾನಿಗಳಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಅಂದಹಾಗೆ, ಗೌರಿ ಧಾರಾವಾಹಿಯ ಚಿತ್ರೀಕರಣ ಆರಂಭದಿಂದಲೂ ಬೆಂಗಳೂರಿನಲ್ಲಿ ನಡೆಯುತ್ತಿತ್ತು. ಕೆಲವು ದಿನಗಳ ಹಿಂದೆಯಷ್ಟೇ ಚೆನ್ನೈಗೆ ಸ್ಥಳಾಂತರಗೊಂಡಿದ್ದರು ಎಂದು ಹೇಳಲಾಗಿದೆ.



