Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಬೆಂಗಳೂರು

ಬೆಂಗಳೂರಿನಲ್ಲಿ 2 ಸ್ಲೀಪರ್ ಕೋಚ್ ಬಸ್‌ ಗಳ ಡಿಕ್ಕಿ: ತಪ್ಪಿದ ಭಾರೀ ದುರಂತ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು

ಬೆಂಗಳೂರು: ಆನೇಕಲ್ ತಾಲೂಕಿನ ಚಂದಾಪುರ ಫ್ಲೈಓವರ್ ಮೇಲೆ ಎರಡು ಸ್ಲೀಪರ್ ಕೋಚ್ ಬಸ್‌ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ.

ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೊರಟಿದ್ದ ಎರಡು ಸ್ಲೀಪರ್ ಬಸ್‌ಗಳು ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಂದಾಪುರದ ಬಳಿ ಡಿಕ್ಕಿ ಹೊಡೆದಿವೆ. ಮುಂಬದಿ ಸಾಗುತ್ತಿದ್ದ ಸ್ಲೀಪರ್ ಬಸ್‌ಗೆ ಹಿಂಬದಿಯಿಂದ ಮತ್ತೊಂದು ಸ್ಲೀಪರ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಅಪಘಾತದಲ್ಲಿ ಎರಡೂ ಬಸ್‌ಗಳು ತೀವ್ರವಾಗಿ ಜಖಂಗೊಂಡಿವೆ.

ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ಪರಿಣಾಮ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment