Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜ್ಯ

6,322 ಪರಿಶಿಷ್ಟ ಕುಟುಂಬಗಳ ಕೊಳವೆಬಾವಿ ಯೋಜನೆ ಚುರುಕುಗೊಳಿಸಲು ಸಚಿವ ಎನ್.ಎಸ್. ಭೋಸರಾಜು ಖಡಕ್ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ 2025-26ನೇ ಸಾಲಿನಲ್ಲಿ ಮಂಜೂರಾಗಿರುವ ಕಾಮಗಾರಿಗಳನ್ನು ವಿಳಂಬವಿಲ್ಲದೆ ಚುರುಕುಗೊಳಿಸಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಸ್‌ಸಿಪಿ (SCP) ಮತ್ತು ಟಿಎಸ್‌ಪಿ (TSP) ಅನುದಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

6,322 ಕುಟುಂಬಗಳಿಗೆ ಲಾಭ:

“2025–26ನೇ ಆರ್ಥಿಕ ಸಾಲಿನಲ್ಲಿ ಎಸ್‌ಸಿಪಿ–ಟಿ‌ಎಸ್‌ಪಿ ಅಡಿಯಲ್ಲಿ 3,939 ಪರಿಶಿಷ್ಟ ಜಾತಿ ಮತ್ತು 2,383 ಪರಿಶಿಷ್ಟ ಪಂಗಡದ ಕುಟುಂಬಗಳು ಸೇರಿದಂತೆ ಒಟ್ಟು 6,322 ರೈತ ಕುಟುಂಬಗಳಿಗೆ ವಿದ್ಯುತ್ ಸಂಪರ್ಕದೊಂದಿಗೆ ಕೊಳವೆಬಾವಿ ಸೌಲಭ್ಯ ಒದಗಿಸಲು ಅನುಮೋದನೆ ನೀಡಲಾಗಿದೆ. ಈ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಮುಗಿಸಿ, ನಿಗದಿತ ಸಮಯದಲ್ಲಿ ರೈತರಿಗೆ ಸೌಲಭ್ಯ ತಲುಪಿಸಬೇಕು,” ಎಂದು ಸಚಿವರು ನಿರ್ದೇಶನ ನೀಡಿದರು.

ಜಲ ಸಂರಕ್ಷಣೆಗೆ ವಿಶೇಷ ಒತ್ತು:

ಅಂತರ್ಜಲ ಮಟ್ಟವನ್ನು ವೃದ್ಧಿಸುವ ದೃಷ್ಟಿಯಿಂದಲೂ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಪರಿಶಿಷ್ಟ ಸಮುದಾಯಗಳ ಕೃಷಿ ಪ್ರದೇಶಗಳಲ್ಲಿ ಚೆಕ್ ಡ್ಯಾಮ್‌ಗಳ ನಿರ್ಮಾಣ ಮತ್ತು ಸಾಮೂಹಿಕ ಏತ ನೀರಾವರಿ ಯೋಜನೆಗಳಂತಹ ‘ಜಲ ಸಂರಕ್ಷಣಾ ರಚನೆ’ಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕಳೆದ ವರ್ಷದ ಸಾಧನೆ:

2024–25ನೇ ಸಾಲಿನಲ್ಲಿ ₹365 ಕೋಟಿ ವೆಚ್ಚದಲ್ಲಿ ಒಟ್ಟು 5,371 ರೈತ ಕುಟುಂಬಗಳಿಗೆ (3,388 ಎಸ್‌ಸಿ ಮತ್ತು 1,983 ಎಸ್‌ಟಿ) ಯಶಸ್ವಿಯಾಗಿ ವಿದ್ಯುತ್ ಸಂಪರ್ಕಿತ ಕೊಳವೆಬಾವಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಕಾರ್ಯದರ್ಶಿಗಳಾದ ಬಿ.ಕೆ. ಪವಿತ್ರ ಹಾಗೂ ಉತ್ತರ ಮತ್ತು ದಕ್ಷಿಣ ವಲಯದ ಮುಖ್ಯ ಅಭಿಯಂತರರು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment