Sunday, May 31, 2026
Google search engine
Homeದೇಶನಿಮ್ಮ ಮನೆಯಲ್ಲಿ ಮಾತೃಭಾಷೆ ಮಾತನಾಡಿ: RSS ಮುಖ್ಯಸ್ಥ ಮೋಹನ್ ಭಾಗವತ್

ನಿಮ್ಮ ಮನೆಯಲ್ಲಿ ಮಾತೃಭಾಷೆ ಮಾತನಾಡಿ: RSS ಮುಖ್ಯಸ್ಥ ಮೋಹನ್ ಭಾಗವತ್

ಜನರು ಭಾಷೆ, ಜಾತಿ ಮತ್ತು ಹಣದ ತಾರತಮ್ಯದಿಂದ ಹೊರಬಂದು ಒಗ್ಗಟ್ಟು ಪ್ರದರ್ಶಿಸಬೇಕು. ಎಲ್ಲಾ ಭಾಷೆಗಳು ಸಮಾನವಾಗಿದ್ದು, ನಿಮ್ಮ ಮಾತೃಭಾಷೆಯನ್ನು ಮನೆಯಲ್ಲಿ ಮಾತ್ರ ಮಾತನಾಡಿ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಛತ್ತೀಸ್ ಘಡದ ರಾಯ್ ಪುರದಲ್ಲಿ ಹಿಂದೂ ಸಮ್ಮೇಳನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಭಾಷಾ ವಿವಾದವನ್ನು ಪ್ರಸ್ತಾಪಿಸಿದರು.

ದೇಶಾದ್ಯಂತ ಅದರಲ್ಲೂ ದಕ್ಷಿಣ ಭಾರತದ ರಾಜ್ಯಗಳು ಕೇಂದ್ರ ಸರ್ಕಾರ ಹಾಗೂ ಇತರೆ ಸಂಸ್ಥೆಗಳಿಂದ ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ್ದು, ಭಾಷಾ ತಾರತಮ್ಯ ಕುರಿತು ಅಸಮಾಧಾನ ವ್ಯಕ್ತಪಡಸಿದ್ದವು. ಅಲ್ಲದೇ ಸ್ಥಳೀಯ ಭಾಷಿಕರು ಕೂಡ ಬೆಂಬಲ ನೀಡಿದ್ದರಿಂದ ದೇಶಾದ್ಯಂತ ಈ ವಿಷಯದಲ್ಲಿ ಚರ್ಚೆ ನಡೆಯುತ್ತಿದೆ.

ಯಾರೇ ಆದರೂ ಹೊರರಾಜ್ಯದಲ್ಲಿ ವಾಸಿಸುತ್ತಿದ್ದರೆ ಅವರು ಕನಿಷ್ಠ ತಮ್ಮ ಮನೆಗಳಲ್ಲಿ ಮಾತೃಭಾಷೆಯಲ್ಲಿ ಮಾತನಾಡಬೇಕು. ನೀವು ಯಾವ ರಾಜ್ಯ ಅಥವಾ ನಗರದಲ್ಲಿ ಇರುತ್ತಿರ. ಅಲ್ಲಿನ ಭಾಷೆ ಕಲಿತು ಮಾತನಾಡುವುದು ಒಳ್ಳೆಯದು. ಏಕೆಂದರೆ ಎಲ್ಲಾ ಭಾಷೆಗಳು ಭಾರತೀಯ ಭಾಷೆಗಳಾಗಿವೆ ಎಂದು ಅವರು ಹೇಳಿದ್ದಾರೆ.

ದೇಶದಲ್ಲಿರುವ ಎಲ್ಲಾ ಭಾಷೆಗಳು ಭಾರತೀಯ ಭಾಷೆಗಳಾಗಿದ್ದು, ಎಲ್ಲಾ ಭಾಷೆಗಳಿಗೂ ಸಮಾನ ಸ್ಥಾನ ಇದೆ. ಹೆಚ್ಚು ಭಾಷೆ ಕಲಿಯುವುದರಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments