ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂರನೇ ಬಾರಿ ಬಿಜೆಪಿ ಅಧಿಕಾರಕ್ಕೇರಿದ ಬೆನ್ನಲ್ಲೇ ಈ ಆದೇಶ ಹೊರಡಿಸಲಾಗಿದ್ದು, ಜೂನ್ 30ರಂದು ಉಪೇಂದ್ರ ದ್ವಿವೇದಿ ಭಾರತೀಯ ಸೇನಾಪಡೆ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಸೇನಾ ಸಿಬ್ಬಂದಿ ಉಪ ಮುಖ್ಯಸ್ಥರಾಗಲಿರುವ ಉಪೇಂದ್ರ ದ್ವಿವೇದಿ, ನೇಮಕಾತಿ ಸೇರಿದಂತೆ ಹಲವು ಪ್ರಮುಖ ಜವಾಬ್ದಾರಿಗಳನ್ನು ಹೊಂದಲಿದ್ದರೆ.
ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ 1984 ಡಿಸೆಂಬರ್ ನಲ್ಲಿ ಜಮ್ಮು ಕಾಶ್ಮೀರದ 18ನೇ ಬ್ಯಾಟಲಿಯನ್ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ ಕಮಾಂಡರ್ ಹುದ್ದೆಯಲ್ಲಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಹಿಮಾಚಲ ಪ್ರದೇಶದಲ್ಲೂ ಸೇನಾ ಮುಖ್ಯ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆ.