Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ನಾಳೆಯಿಂದ ಎಡದಂಡೆ, ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು

ಶಿವಮೊಗ್ಗ: ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತ ನಿರ್ಣಯ ಕೈಗೊಳ್ಳಲಾಯಿತು.

ಇಂದು ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2025-26ನೇ ಸಾಲಿನ ಬೇಸಿಗೆ ಬೆಳೆಗೆ ನೀರು ಹರಿಸುವ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅ‍ಧ್ಯಕ್ಷತೆ ವಹಿಸಿದ್ದ  ಸಚಿವ ಮಧು ಬಂಗಾರಪ್ಪ ಮಾತನಾಡಿ, ಮುಂದಿನ ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡಚಣೆ ಆಗದಂತೆ ಅವಶ್ಯಕವಾಗಿರುವ ನೀರನ್ನು ಒದಗಿಸಲು ಮತ್ತು ನಗರ ಪಟ್ಟಣ ಪ್ರದೇಶಗಳಿಗೆ ಕುಡಿಯುವ ನೀರನ್ನು ಪೂರೈಸುವುದನ್ನು ಗಮನದಲ್ಲಿಟ್ಟುಕೊಂಡು ನೀರನ್ನು ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದವರು ನುಡಿದರು.

ಅಚ್ಚುಕಟ್ಟು ವ್ಯಾಪ್ತಿಯ ನಾಲೆ, ಕೆರೆಗಳಲ್ಲಿ ತುಂಬಿರುವ ಹೂಳನ್ನು ನರೇಗಾ ಯೋಜನೆಯಡಿ ತೆಗೆಯಿಸಬಹುದಾದರೂ ಪಟ್ಟಣ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿನ ನಾಲೆ, ಕೆರೆಗಳಲ್ಲಿನ ಹೂಳನ್ನು ತೆಗೆಯಿಸುವುದು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ನಿರೀಕ್ಷೆಯಂತೆ ಸಕಾಲದಲ್ಲಿ ಜಲಾಶಯದಿಂದ ಹರಿಸುವ ನೀರು ನಿಗಧಿತ ಗುರಿ ತಲುಪುತ್ತಿಲ್ಲ. ಆದ್ದರಿಂದ ಪ್ರಾಧಿಕಾರದ ನೀರಾವರಿ ಇಂಜಿನಿಯರ್‌ರವರು ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಪ್ರಸ್ತಾವನೆಯನ್ನು ತಯಾರಿಸಿ ಕೂಡಲೇ ಸಲ್ಲಿಸಬೇಕು. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಲ್ಲಿ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment