Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಭಕ್ತಸಾಗರಕ್ಕೆ ಸಾಕ್ಷಿಯಾದ ಕೊಪ್ಪಳದ ಐತಿಹಾಸಿಕ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 20 ವೀಕ್ಷಣೆಗಳು
koppal jatre

ಕೊಪ್ಪಳ: ಕೊಪ್ಪಳದ ಜನತೆಗೆ ಪ್ರತಿ ವರ್ಷದಂತೆ ಹೊಸ ವರ್ಷದ ಹೊಸ್ತಿಲ ದಾಟಿ ಬರುವ ಮೊದಲ ಸಡಗರವೇ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ. ಇದು ಕೇವಲ ಮಠದ ಜಾತ್ರೆ ಎನಿಸದೇ ಸಮಾಜಮುಖಿಯ ಯಾತ್ರೆ ಎಂದೇ ಪ್ರಸಿದ್ಧಿ. ಇಂಥ ವೈಭವದ ಜಾತ್ರೆಯ ಮಹಾರಥೋತ್ಸವ ಸೋಮವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.

ನಸುಕಿನ ಜಾವ 2 ಗಂಟೆಯಿಂದಲೇ ಗವಿಮಠಕ್ಕೆ ಭಕ್ತರ ದಂಡು ಹರಿದು ಬರಲಾರಂಭಿಸಿತು. ಭಕ್ತರ ಹಸಿವು ನೀಗಿಸಲು ದಾಸೋಹದ ವ್ಯವಸ್ಥೆ ಅಚ್ಚುಕಟ್ಟಾಗಿದ್ದರಿಂದ ಜನರು ಮಠದ ಸುತ್ತಮುತ್ತ ಇರುವ ಜಾತ್ರೆಯ ಸಡಗರವನ್ನು ಸಂಜೆವರೆಗೆ ಕಣ್ತುಂಬಿಕೊಂಡು ರಥೋತ್ಸವದ ಬಳಿಕ ಭಕ್ತಿಭಾವದಿಂದ ಮನೆಗೆ ಮರಳಿದರು. ಮಠದ ಸುತ್ತಲೂ ಪೊಲೀಸ್‌ ಬಿಗಿ ಬಂದೋಬಸ್ತ್‌ ಇದ್ದು, ಸಂಚಾರ ದಟ್ಟಣೆ ಉಂಟಾಗದೇ, ಜನಸಂಚಾರ ಸುಗಮವಾಗಿತ್ತು. ಮೂರು ದಿನಗಳ ಕಾಲ ಮಠದ ಸುತ್ತಲೂ ಈ ವಾತಾವರಣವನ್ನೇ ಕಾಯ್ದುಕೊಳ್ಳಲಾಗುತ್ತದೆ.

ಗವಿಸಿದ್ಧೇಶ್ವರ ಮಹಾರಾಜ್‌ ಕೀ ಜೈ:

ಸಂಜೆಯಾಗುತ್ತಿದ್ದಂತೆ ಗವಿಮಠದ ಆವರಣದಲ್ಲಿ ಕಾಲಿಡಲು ಆಗದಷ್ಟು ಜನಸಂದಣಿ ಜಮಾವಣೆಗೊಂಡಿತು. ಸುಮಾರು 5 ಲಕ್ಷ ಜನರು ರಥೋತ್ಸವದ ವೇಳೆ ಸೇರಿದ್ದರು. ಸಂಸ್ಥಾನ ಶ್ರೀ ಗವಿಮಠದ ಅಭಿನವ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ರಥಕ್ಕೆ ಪೂಜೆ ಸಲ್ಲಿಸಿದ ಬಳಿಕ ತೆರನೇಳೆಯಲಾಯಿತು.

ಉತ್ತತ್ತಿ, ಬಿಲ್ಪತ್ರೆ, ಬೇಡವೆಂದರೂ ಬಾಳೆಹಣ್ಣು, ನಾಣ್ಯಗಳನ್ನು ತೇರಿನತ್ತ ಎಸೆದು ನಿಷ್ಕಲ್ಮಶ ಭಕ್ತಿ ಮೆರೆದು ಜನ ಪುನೀತರಾದರು. ಸುಮಾರು ಒಂದು ಕಿ.ಮೀ. ದೂರದವರೆಗೆ ಸಾಗಿದ ತೇರಿಗೆ ನಿಂತಲ್ಲೇ ಕೈ ಮುಗಿದ ಜನರು, ಗವಿಸಿದ್ಧೇಶ್ವರ ಮಹಾರಾಜ್‌ ಕೀ ಜೈ ಎನ್ನುತ್ತಾ ಜಯಕಾರ ಸಮರ್ಪಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment