Sunday, May 31, 2026
Google search engine
Homeರಾಜ್ಯಬಳ್ಳಾರಿ ಘರ್ಷಣೆ: ಪೊಲೀಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗ ಮಾಡಿ ಸರ್ಕಾರ ಆದೇಶ

ಬಳ್ಳಾರಿ ಘರ್ಷಣೆ: ಪೊಲೀಸ್ ಅಧಿಕಾರಿ ವರ್ತಿಕಾ ಕಟಿಯಾರ್ ವರ್ಗ ಮಾಡಿ ಸರ್ಕಾರ ಆದೇಶ

ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪೊಲೀಸ್‌ ಐಜಿ ವರ್ತಿಕಾ ಕಟಿಯಾರ್ ವರದಿ ಆಧರಿಸಿ ಇತ್ತೀಚೆಗೆ ಎಸ್ಪಿ ಪವನ್‌ ನೆಜ್ಜೂರು ಅವರನ್ನು ಅಮಾನತುಗೊಳಿಸಿದ್ದ ರಾಜ್ಯ ಸರ್ಕಾರ ಇದೀಗ ವರ್ತಿಕಾ ಕಟಿಯಾರ್ ಅವರನ್ನು ಕೂಡ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.

ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಪಿಎಸ್ ಹರ್ಷ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಜ.1 ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಬ್ಯಾನರ್‌ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿತ್ತು.

ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್‌ ಈ ಪ್ರಕರಣವನ್ನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ-ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್‌ ಅವರನ್ನ ಸರ್ಕಾರ ವರ್ಗಾವಣೆ ಗೊಳಿಸಿದೆ ಎಂದು ಹೇಳಲಾಗಿದೆ.

ಅಮಾನತು ಬೆನ್ನಲ್ಲೇ ಪವನ್ ನಜ್ಜೂರ್ ತುಮಕೂರಿನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿಗಳು ಹರಿದಾಡಿದ್ದವು. ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಮಾತ್ರೆ ಸೇವಿಸಿದ್ದ ನಜ್ಜೂರ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎನ್ನಲಾಗಿತ್ತು. ಬಳಿಕ ಈ ಬಗ್ಗೆ ಖುದ್ಧು ಸ್ಪಷ್ಟನೆ ನೀಡಿದ್ದ ಎಸ್​ಪಿ ಪವನ್ ನೆಜ್ಜೂರ್ ಅವರ ತಂದೆ ಯಾವುದೇ ಕಾರಣಕ್ಕೂ ನನ್ನ ಪುತ್ರ ಆತ್ಮಹತ್ಯೆಯ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು. ಇದೇ ವಿಚಾರ ಇಟ್ಟುಕೊಂಡು ವಿಪಕ್ಷ ಬಿಜೆಪಿ ರಾಜ್ಯ ಸಕರ್ಕರದ ವಿರುದ್ಧ ಮುಗಿಬಿದ್ದಿತ್ತು.

ಬಳ್ಳಾರಿ ಬ್ಯಾನರ್ ಗಲಭೆ ಪ್ರಕರಣದಲ್ಲಿ 26 ಮಂದಿ ಹಾಗೂ ಒಬ್ಬ ಖಾಸಗಿ ಗನ್‌ಮ್ಯಾನ್ ಬಂಧಿತರಾಗಿದ್ದಾರೆ. ಘಟನೆಯಲ್ಲಿ ಬಳಸಿದ್ದ ಬುಲೆಟ್‌ಗಳು, ಗಾಜಿನ ಬಾಟಲಿಗಳು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಬ್ಯಾನರ್​​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಿತ್ತು. ದುರ್ದೈವ ಅಂದರೆ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಸಸ್ಪೆಂಡ್ ಆಗಿದ್ದರು. ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ವಿಫಲವಾಗಿದ್ದಾರೆ. ಹೀಗಾಗಿ ಪವನ್ ನೆಜ್ಜೂರು ಅವರನ್ನು ಅಮಾನತು ಮಾಡುವಂತೆ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಸರ್ಕಾರಕ್ಕೆ ವರದಿ ನೀಡಿದ್ದರು. ಆ ಬೆನ್ನಲ್ಲೇ ಸರ್ಕಾರ ಕ್ರಮ ಕೈಗೊಂಡಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments