ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಹಲವಾರು ಭಾರತೀಯರು ಸೇರಿದಂತೆ 41 ಮಂದಿ ಮೃತಪಟ್ಟಿದ್ದು, 43ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಾಫ್ ನಗರದ ಬಿಲ್ಡಿಂಗ್ ಹೌಸಿಂಗ್ ವರ್ಕರ್ಸ್ ಅಪಾರ್ಟ್ ಮೆಂಟ್ ನಲ್ಲಿ 160ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದವು. 6ನೇ ಮಹಡಿಯ ಕಿಚನ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ.
ಸ್ಥಳೀಯ ಕಾಲಮಾನ 6 ಗಂಟೆ ಸುಮಾರಿಗೆ ಸಂಭವಿಸಿದ ಘಟನೆಯಲ್ಲಿ 43 ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ಕೆಲವು 5ನೇ ಮಹಡಿಯಿಂದ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾರತದ ರಾಯಭಾರ ಕಚೇರಿ ಹೆಲ್ಫ್ ಲೈನ್ ಆರಂಭಿಸಿದ್ದು, ಮೃತರು ಹಾಗೂ ಗಾಯಾಳುಗಳ ವಿವರ ಸಂಗ್ರಹಿಸಿ ಕುಟುಂಬದವರಿಗೆ ತಲುಪಿಸುವ ಕೆಲಸ ಮಾಡುತ್ತಿದೆ.