Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಶೀಘ್ರದಲ್ಲೇ 2 ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 33 ವೀಕ್ಷಣೆಗಳು
laxmi hebbalkar
laxmi hebbalkar

ಬೆಂಗಳೂರು: ಹಣಕಾಸು ಇಲಾಖೆಯಿಂದ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ ತಿಳಿಸಿದ್ದಾರೆ.

ಗುರುವಾರ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಕುರಿತಂತೆ ಈಗಾಗಲೇ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದು, ಮುಖ್ಯಮಂತ್ರಿಗಳು ಕೂಡ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದರು.

ಅನರ್ಹ ರೇಷನ್ ಕಾರ್ಡ್ ರದ್ದಾಗಿರುವ ಕಾರಣ ಕೆಲವರಿಗೆ ಹಣ ಸಂದಾಯವಾಗಿಲ್ಲ. ಆಹಾರ ಇಲಾಖೆಯಿಂದ ಹೊಸ ಡೇಟಾ ಬಂದ ತಕ್ಷಣ ಅವರಿಗೂ ದುಡ್ಡು ರಿಲೀಸ್ ಆಗಲಿದೆ. ರೇಷನ್ ಕಾರ್ಡ್ ಆಧರಿಸಿ ನಾವು ಗೃಹಲಕ್ಷ್ಮಿ ಫಲಾನುಭವಿಗಳಿಗೆ ದುಡ್ಡು ಹಾಕುತ್ತಿದ್ದೇವೆ. ಕೆಲ ರೇಷನ್ ಕಾರ್ಡ್ ರದ್ದಾದಾಗ ದುಡ್ಡು ಹೋಲ್ಡ್ ಆಗಿರಬಹುದು. ಆದರೆ ಅವರು ತೆರಿಗೆ ಪಾವತಿದಾರರಲ್ಲದಿದ್ದಲ್ಲಿ ಹಣ ಸಿಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು, 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ. ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇದ್ದು, ಹೆಚ್ಚು ಷರತ್ತು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲಾಗುವುದು. ಜೊತೆಗೆ ಆರೋಗ್ಯ ವಿಮೆಯನ್ನು ನೀಡುವ ಯೋಚನೆ ಇದೆ ಎಂದು ಸಚಿವರು ಹೇಳಿದರು.

ನಮ್ಮ ಇಲಾಖೆ ಹಾಗೂ ಗೃಹ ಇಲಾಖೆ ಸಹಯೋಗದಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ಬಹಳಷ್ಟು ಮಹಾತ್ವಾಕಾಂಕ್ಷಿ ಇಟ್ಟುಕೊಂಡು ಅಕ್ಕಪಡೆ ಆರಂಭಿಸಲಾಗಿದೆ. ಈಗಾಗಲೇ ಸಿಬ್ಬಂದಿ ನೇಮಿಸಿದ್ದು, ಅವರಿಗೆ ತರಬೇತಿ ನೀಡಲಾಗುತ್ತಿದೆ.

ಗೃಹಲಕ್ಷ್ಮಿ ಸಹಕಾರ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು, 6 ತಿಂಗಳು ಆದ ಬಳಿಕ ಸಾಲ ಸೌಲಭ್ಯ ಪಡೆಯಲು ಅರ್ಹರಾಗುತ್ತಾರೆ. ನನ್ನ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇದ್ದು, ಹೆಚ್ಚು ಕಂಡೀಷನ್‌ಗಳನ್ನು ಹಾಕದೇ ಅರ್ಹರನ್ನು ಗುರುತಿಸಿ ಸಾಲ ನೀಡಲಾಗುವುದು. ಜೊತೆಗೆ ಆರೋಗ್ಯ ವಿಮೆಯನ್ನು ನೀಡುವ ಯೋಚನೆ ಇದೆ ಎಂದು ಸಚಿವರು ಹೇಳಿದರು.

ನಮ್ಮ ಇಲಾಖೆ ಹಾಗೂ ಗೃಹ ಇಲಾಖೆ ಸಹಯೋಗದಲ್ಲಿ ಅಕ್ಕ ಪಡೆ ಆರಂಭಿಸಲಾಗಿದೆ. ಬಹಳಷ್ಟು ಮಹಾತ್ವಾಕಾಂಕ್ಷಿ ಇಟ್ಟುಕೊಂಡು ಅಕ್ಕಪಡೆ ಆರಂಭಿಸಲಾಗಿದೆ. ಈಗಾಗಲೇ ಸಿಬ್ಬಂದಿ ನೇಮಿಸಿದ್ದು, ಅವರಿಗೆ ತರಬೇತಿ ನೀಡಲಾಗುತ್ತಿದೆ. ಬಸ್‌ ಸ್ಟಾಪ್, ದೇವಸ್ಥಾನ, ಮಾಲ್‌ಗಳಲ್ಲಿ, ಪಾರ್ಕ್‌ಗಳಲ್ಲಿ ಅಕ್ಕ ಪಡೆ ಗಸ್ತು ತಿರುಗಲಿದೆ ಎಂದು ಸಚಿವರು ಹೇಳಿದರು.

ಅಕ್ಕಪಡೆ ಸ್ಕೂಲ್, ಕಾಲೇಜುಗಳಿಗೂ ಹೋಗಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದು, ದೂರು ಕೊಡಲು ಅಂಜುವ ಹೆಣ್ಣುಮಕ್ಕಳ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅಕ್ಕಪಡೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ, ಸಾಮಾಜಿಕ ಜಾಲತಾಣಗಳಲ್ಲಿ ವಂಚನೆಗೊಳಗಾದ ಮಹಿಳೆಯರು, ಕೌಟುಂಬಿಕ ಸಮಸ್ಯೆ ಎದುರಿಸುತ್ತಿರುವ ಹೆಣ್ಣುಮಕ್ಕಳು ಸಹ ದೂರು ನೀಡಬಹುದು ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment