Thursday, August 20, 2026
Google search engine
Homeಜಿಲ್ಲಾ ಸುದ್ದಿಹೃದಯಾಘಾತದಿಂದ ಬಚ್ಚಲು ಮನೆಯಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಬಚ್ಚಲು ಮನೆಯಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಬಚ್ಚಲು ಮನೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಶುಕ್ರವಾರ ಸಂಭವಿಸಿದೆ.

ಬಳ್ಳಾರಿ ಮೂಲದ 21 ವರ್ಷದ ಯುವ ಗಣೇಶ್ ಮೃತಪಟ್ಟ ದುರ್ದೈವಿ.

ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದು, ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ವಾಸವಾಗಿದ್ದನು. ಇಂದು ಹಾಸ್ಟೆಲ್ ನ ಬಾತ್ ರೂಂಗೆ ಹೋದ ಯುವಕ ಕುಸಿದು ಬಿದ್ದಿದ್ದಾನೆ.

ಯುವಕನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆದಲ್ಲಿ ಗಣೇಶ್ ಮೃತಪಟ್ಟಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಗಣೇಶ್ 5 ನೇ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments