ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ. ಸೂಕ್ತ ಭದ್ರತೆ ನೀಡುವಂತೆ ಕೆಎಸ್ ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ರಕ್ಷಣಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜವವರಿ 7ರಂದು ಈಶ್ವರಪ್ಪ ಅವರಿಗೆ ವಿದೇಶದಿಂದ ಕರೆ ಬಂದಿದೆ ಎಂದು ತಿಳಿದು ಬಂದಿದೆ. ಸದ್ಯ ಪ್ರವಾಸದಲ್ಲಿರುವ ಈಶ್ವರಪ್ಪ ಶಿವಮೊಗ್ಗಕ್ಕೆ ಹಿಂತಿರುಗಿದ ಬಳಿಕ ದೂರು ನೀಡಲು ನಿರ್ಧರಿಸಿದ್ದಾರೆ. ಜನವರಿ 9ರಂದು ಅವರು ಜಿಲ್ಲಾ ರಕ್ಷಣಾಧಿಕಾರಿ ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ಆರ್ಟಿಕಲ್ 370 ಕುರಿತು ಮಾತನಾಡುವುದು ನಿಲ್ಲಸಿದೆ ಇದ್ದರೆ 48 ಗಂಟೆಗಳಲ್ಲಿ ಕೊಲೆ ಮಾಡುವುದಾಗಿ ಕರೆ ಬಂದಿತ್ತು.
2023ರಲ್ಲಿ ಬೆದರಿಕೆ ಕರೆ ಬಂದಿತ್ತು. ಅಲ್ಲದೆ ಪಿಎಫ್‌ಐ ಕಾರ್ಯಕರ್ತರು ತಮ್ಮ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಈಶ್ವರಪ್ಪ ಆರೋಪಿಸಿದ್ದರು. 2024ರಲ್ಲಿ ತಮ್ಮ ಬೆಂಬಲಿಗರಿಗೂ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ಈಶ್ವರಪ್ಪ ಅವರು ಶಿವಮೊಗ್ಗ ಎಸ್‌ಪಿ ಅವರಿಗೆ ದೂರು ನೀಡಿದ್ದಾರೆ.
ವಿದೇಶದಿಂದ ಕೊಲೆ ಬೆದರಿಕೆ ಹಿನ್ನೆಲೆ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರಿಗೆ ಪೊಲೀಸ್ ಭದ್ರತೆ ಮತ್ತು ಎಸ್ಕಾರ್ಟ್ ಒದಗಿಸಲಾಗಿತ್ತು. ಇತ್ತೀಚೆಗೆ ಈಶ್ವರಪ್ಪ ಅವರಿಗೆ ಒದಗಿಸಿದ್ದ ಎಸ್ಕಾರ್ಟ್ ಮತ್ತು ಪೊಲೀಸ್ ಭದ್ರತೆಯನ್ನು ಸರ್ಕಾರ ಹಿಂಪಡೆದಿತ್ತು. ಇದರ ಬೆನ್ನಿಗೆ ಪುನಃ ಬೆದರಿಕೆ ಕರೆ ಬಂದಿದೆ ಎಂದು ಆರೋಪಿಸಲಾಗಿದೆ.
ಸೂಕ್ರ ಕ್ರಮಕ್ಕೆ ಆಗ್ರಹಿಸಿ ಮನವಿ
ವಿದೇಶಿ ಮೂಲದಿಂದ ಅಂತಾರಾಷ್ಟ್ರೀಯ ಕರೆ ಬಂದಿರುವ ಕಾರಣ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹಾಗೂ ರಾಷ್ಟ್ರಭಕ್ತರ ಬಳಗದ ವತಿಯಿಂದ ಎಸ್ಪಿ ನಿಖಿಲ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈಶ್ವರಪ್ಪನವರ ಅಧಿಕೃತ ಮೊಬೈಲ್ ದೂರವಾಣಿ ಸಂಖ್ಯೆ 9880030004 ಗೆ ಜನವರಿ 7 ರಂದು ವಿದೇಶಿ ಮೂಲದಿಂದ ಅಂತರಾಷ್ಟ್ರೀಯ ಮೊಬೈಲ್ ದೂರವಾಣಿ ಸಂಖ್ಯೆ+358465445069 ಇಂದ ಕರೆ ಬಂದಿದೆ. ಈ ಮೊದಲು ಅಂತರಾಷ್ಟ್ರೀಯ ಸಂಖ್ಯೆಯಿಂದ ಜೀವ ಬೆದರಿಕೆ ಕರೆಗಳು ಬಂದಿದ್ದವು. ಆದ್ದರಿಂದ ಈ ವಿಷಯವಾಗಿ ಸೂಕ್ತ ತನಿಖೆ ಮಾಡುವುದಲ್ಲದೆ ಜೀವನ ಬೆದರಿಕೆ ಇರುವ ಕಾರಣ ಹೆಚ್ಚಿನ ಭದ್ರತೆಯನ್ನು ಒದಗಿಸುವಂತೆ ಈಶ್ವರಪ್ಪ ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ, ಈಶ್ವರಪ್ಪ
ಕರೆಗಳಿಂದ ಬಂದಿರುವುದು ಒಂದು ತನಿಖೆ ಆಗಬೇಕು. ಈ ಕರೆಗಳು ಯಾವ ಸಂಘಟನೆಯದು ಎಂಬುದು ಮೊದಲು ಸ್ಪಷ್ಟವಾಗಬೇಕು. ನಾನು ಮೊದಲು ಕರೆಯನ್ನ ಸ್ವೀಕರಿಸಲಿಲ್ಲ. ನಂತರ ಆ ನಂಬರ್ ಗೆ ಕರೆ ಮಾಡಿದರೆ ಕರೆ ಸ್ವೀಕೃತವಾಗಿಲ್ಲ. ಹಾಗಾಗಿ ತನಗೆ ನೀಡಿರುವ ಭದ್ರತೆಯನ್ನು ಸರ್ಕಾರ ಹೆಚ್ಚಿಸಬೇಕು ಎಂದು ತಿಳಿಸಿದರು.



