Monday, May 25, 2026
Google search engine
Homeದೇಶದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣ: ಶಬರಿಮಲೆಯ ಪ್ರಧಾನ ಅರ್ಚಕ ಅರೆಸ್ಟ್

ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣ: ಶಬರಿಮಲೆಯ ಪ್ರಧಾನ ಅರ್ಚಕ ಅರೆಸ್ಟ್

ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನಾಭರಣ ಕಳವು ಪ್ರಕರಣದಲ್ಲಿ ಪ್ರಧಾನ ಅರ್ಚಕ ತಂತ್ರಿ ಕಂದರಾರು ರಾಜೀವಾರು ಅವರನ್ನು ಎಸ್ ಐಟಿ ಪೊಲೀಸರು ಬಂಧಿಸಿದ್ದಾರೆ.

ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಶುಕ್ರವಾರ ಮುಂಜಾನೆ ವಶಕ್ಕೆ ಪಡೆದು ಗೌಪ್ಯ ಜಾಗದಲ್ಲಿ ವಿಚಾರಣೆ ನಡೆಸಿದ ಎಸ್ ಐಟಿ ಪೊಲೀಸರು ಮಧ್ಯಾಹ್ನ ಕಚೇರಿಗೆ ಕರೆದುಕೊಂಡು ಬಂದು ಬಂಧಿಸಿದರು.

ಶನಿವಾರ ಬೆಳಿಗ್ಗೆ ನ್ಯಾಯಾಲಯದ ಮುಂದೆ ಹಾಜರಪಡಿಸಿ ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಇದೀಗ ರಾಜೀವಾರು ಅವರನ್ನು 15ನೇ ಆರೋಪಿಯಾಗಿ ಉಲ್ಲೇಖಿಸಲಾಗಿದೆ.

ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪಾಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷ ಎ ಪದ್ಮಕುಮಾರ್ ನೀಡಿದ ಹೇಳಿಕೆಗಳನ್ನು ಆಧರಿಸಿ ಪ್ರಧಾನ ಅರ್ಚಕರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜೀವರು ಪಾಟಿಯೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು ಮತ್ತು ದ್ವಾರಪಾಲಕರ ವಿಗ್ರಹಗಳ ಚಿನ್ನದ ಲೇಪನ ಬದಲಾಯಿಸಲು ಶಿಫಾರಸು ಮಾಡಿದ್ದಾರೆ ಎಂದು SIT ತನಿಖೆ ವೇಳೆ ತಿಳಿದುಬಂದಿದೆ.

ನಂತರ, ತಿರುವಾಂಕೂರು ದೇವಸ್ವಂ ಮಂಡಳಿಯು ಮರುಲೇಪನಕ್ಕೆ ಅನುಮತಿ ಕೋರಿದಾಗ ರಾಜೀವರು ಅನುಮೋದನೆಯನ್ನು ನೀಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಈ ಹಿಂದೆ ರಾಜೀವರನ್ನು ವಿಚಾರಣೆ ನಡೆಸಲಾಗಿತ್ತು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಚಿನ್ನ ಕಳ್ಳತನ ಪ್ರಕರಣದ ತನಿಖೆಗಾಗಿ ಕೇರಳ ಹೈಕೋರ್ಟ್ ಎಸ್‌ಐಟಿ ರಚಿಸಿದ ನಂತರ ಪ್ರಕರಣದಲ್ಲಿ ಬಂಧಿತರಾದವರಲ್ಲಿ ರಾಜೀವರ 11 ನೇ ವ್ಯಕ್ತಿಯಾಗಿದ್ದಾರೆ.

ರಿಮಾಂಡ್ ಪ್ರಕ್ರಿಯೆಯ ಭಾಗವಾಗಿ ಅವರನ್ನು ವಿಜಿಲೆನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ದೇವಸ್ವಂ ಸಚಿವ ವಿ ಎನ್ ವಾಸವನ್ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments