Friday, May 15, 2026
Google search engine
Homeರಾಜ್ಯಸೇಡಂನಲ್ಲಿ 1595 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ

ಸೇಡಂನಲ್ಲಿ 1595 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ

ಕಲಬುರಗಿ: ಕೇಂದ್ರ ಸರ್ಕಾರ ಉದ್ಯೋಗದ ಹಕ್ಕನ್ನು ಕಸಿದುಕೊಂಡು ಕಾರ್ಮಿಕರಿಗೆ ಅನ್ಯಾಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಸೇಡಂನಲ್ಲಿ ಅಂತರರಾಷ್ಟ್ರೀಯ ಮಟ್ಟದ ಜಿಟಿಟಿಸಿ ಕೇಂದ್ರ ಗಳು ಸೇರಿದಂತೆ 680 ಕೋಟಿಗಳ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ನೆರವೇರಿಸಿ ಮಾತನಾಡಿದರು.

MNREGA ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರ ಅವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮಾ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿಜಿ ರಾಮ್ ಜಿ ಎಂದು ಹೆಸರಿಸಿದ್ದಾರೆ. ಈ ಮೂಲಕ ಮಹಾತ್ಮಾ ಗಾಂಧಿ ಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರ 60% ಅನುದಾನ ನೀಡಿ ರಾಜ್ಯಗಳು 40% ಅನುದಾನ ನೀಡಬೇಕು. ಇದನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದ್ದು , ಕಾನೂನಿನ ಸಮರಕ್ಕೆ ಮುಂದಾಗಿದೆ. ವಿಶೇಷ ಅಧಿವೇಶನ ಕರೆದು ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

ವಿಬಿಜಿ ರಾಮ್ ಜಿ ಕಾಯ್ದೆರದ್ದು ಮಾಡುವವರೆಗೆ ಹೋರಾಟ ನಿಲ್ಲುವುದಿಲ್ಲ
ಈ ಕಾಯ್ದೆ ದಶರಥ ರಾಮನೂ ಅಲ್ಲ, ಕೌಸಲ್ಯರಾಮನೂ ಅಲ್ಲ.ಅದು ನಾಥೂರಾಮ್. ವಿಬಿಜಿ ರಾಮ್ ಜಿ ಕಾಯ್ದೆಯನ್ನು ರದ್ದು ಮಾಡುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಭರವಸೆಗಳನ್ನು ಈಡೇರಿಸುವ ಸರ್ಕಾರ

ಜೇವರ್ಗಿ ಮತ್ತು ಸೇಡಂ ನಲ್ಲಿ ಇಂದು 1595 ಕೋಟಿ ರೂ ಗಳ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಸೇಡಂ ಕ್ಷೇತ್ರದಲ್ಲಿ 579.68 ಕೋಟಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ . 108 .35 ಕೋಟಿ ರೂ ಗಳ ಕಾಮಗಾರಿಗಳನ್ನು ಉದ್ಘಾಟಿಸಲಾಗಿದೆ . ನಮ್ಮ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದೆ ಎಂದರು.

ಬಿಜೆಪಿ ಸರ್ಕಾರ 2018 ರಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ 10% ಭರವಸೆಗಳನ್ನು ಕೂಡ ಈಡೇರಿಸಲಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಅಪಪ್ರಚಾರ ಮತ್ತು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಜನಕ್ಕೆ ಸತ್ಯವೇನೆಂದು ಅರಿವಾಗಬೇಕು ಎಂದರು.

ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ

371 ಜೆ ಕಾಯ್ದೆಯಿಂದಾಗಿ ಈ ಭಾಗದಲ್ಲಿ ಹತ್ತು ಸಾವಿರ ವೈದ್ಯರು, 30, 000 ಇಂಜಿನಿಯರ್ ಗಳು , 12,000 ಜನ ದಂತ ವೈದ್ಯರು ಹಾಗೂ ಇನ್ನಿತರೆ ಉನ್ನತ ಶಿಕ್ಷಣ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿ 70% ಮೀಸಲಾತಿ ನೀಡಲಾಯಿತು. ಇವೆಲ್ಲವೂ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ ಎಂದರು. 85000 ಜನರಿಗೆ ಸರ್ಕಾರಿ ನೌಕರಿ ದೊರಕಲು ಸಾಧ್ಯವಾಯಿತು ಎಂದರು. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದರು. ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಮಾಡಲಾಗಿದೆ ಎಂದೂ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹೇಳಿದರು.

ಪ್ರಧಾನ ಮಂತ್ರಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಲ್ಲಿ ರೂ. 1,12,000 ಕೋಟಿ ರೂಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಲಾಗಿದೆ. ಖಜಾನೆಯಲ್ಲಿ ಹಣವಿಲ್ಲದಿದ್ದರೆ ಇಂದು 680 ಕೋಟಿ ರೂ ಗಳ ಯೋಜನೆಗೆ ಚಾಲನೆ ನೀಡಲು ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದರು.

73 ಕೋಟಿ ರೂ ಗಳ ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆ

ಸೇಡಂ ನಲ್ಲಿ 73 ಕೋಟಿ ರೂ ಗಳ ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರ ಸ್ಥಾಪನೆಯಾಗುತ್ತಿದೆ. ಇಲ್ಲಿ ತರಬೇಟಿ ಪಡೆದವರಿಗೆ ನೂರಕ್ಕೆ ನೂರರಷ್ಟು ಕೆಲಸ ದೊರಕುತ್ತದೆ ಎಂದರು.ಬಿಜೆಪಿ ಅಧಿಕಾರದ ಅವಧಿಯಲ್ಲಿ 4 ಜಿಟಿಟಿಸಿ ಸ್ಥಾಪಿಸಿದ್ದರೆ. ಎರಡೂವರೆ ವರ್ಷಗಳಲ್ಲಿ ನಮ್ಮ ಸರ್ಕಾರ 10 ಜಿಟಿಟಿಸಿ ಪ್ರಾರಂಭ ಮಾಡಿದ್ದೇವೆ ಎಂದರು.

ಸೇಡಂ ನಲ್ಲಿ 4 ಏತ ನೀರಾವರಿ ಯೋಜನೆ

ಸೇಡಂ ನಲ್ಲಿ ಕಾಚೂರ ಏತ ನೀರಾವರಿಗೆ 85.50 ಲಕ್ಷ, ಬೀರನಹಳ್ಳಿ 90 ಕೋಟಿ ಯಡಹಳ್ಳಿ ಏತ ನೀರಾವರಿ ಯೋಜನೆಗೆ 67.30 ಕೋಟಿ ತರನ ಹಳ್ಳಿ 82.90 ಕೋಟಿ, ಒದಗಿಸಲಾಗಿದೆ. ಇದರಿಂದ 8000 ಹೆಕ್ಟೇರ್ ಗೆ ನೀರಾವರಿ ದೊರಕಲಿದೆ. ಇದರಿಂದ ತೊಗರಿ, ಕಬ್ಬು ಮುಂತಾದ ವಾಣಿಜ್ಯ ಬೆಳೆಗಳನ್ನು ಬೆಳೆಯಬಹುದಾಗಿದೆ. ಅಂತರ್ಜಲ ಮಟ್ಟವನ್ನು ಇದರಿಂದ ಹೆಚ್ಚು ಮಾಡಬಹುದಾಗಿದೆ. ಕುಡಿಯುವ ನೀರಿಗೆ ಸಹ ಉಪಯೋಗವಾಗಲಿದೆ ಎಂದರು.

ಎಲ್ಲಾ ಜಿಲ್ಲೆಗಳಿಗೂ ವೈದ್ಯಕೀಯ ಕಾಲೇಜುಗಳು

ಎಲ್ಲಾ ಜಿಲ್ಲೆಗಳೂ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಕನ್ನಡ, ರಾಮನಗರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಈ ವರ್ಷ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು . ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದುಬಾರಿಯಾಗಿರುವುದರಿಂದ ಸರ್ಕಾರ ಬಡವರಿಗೆ ಅನುಕೂಲ ಕಲ್ಪಿಸಲು ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುತ್ತಿದೆ ಎಂದರು.

ನಮ್ಮ ಸರ್ಕಾರ ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಅವರು ಇಲ್ಲದೇ ಹೋಗಿದ್ದರೆ 371 ಜೆ ಜಾರಿಯಾಗುತ್ತಿರಲಿಲ್ಲ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments