Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ದೇಶ

ಕೇಂದ್ರದ ಸೂಚನೆ ಮೇರೆಗೆ `10 ನಿಮಿಷದಲ್ಲಿ ಡೆಲಿವರಿ’ ರದ್ದುಗೊಳಿಸಿದ ಬ್ಲಿಂಕಿಟ್, ಸ್ವಿಗ್ಗಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
blinkit

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಮನೆ ಮನೆಗೆ ವಸ್ತುಗಳನ್ನು ಡೆಲಿವರಿ ಮಾಡುವ ವ್ಯವಸ್ಥೆಯನ್ನು ಬ್ಲಿಂಕಿಟ್ (Blinkit) ಮತ್ತು ಸ್ವಿಗ್ಗಿ ಕೈಬಿಟ್ಟಿದೆ.

ಉದ್ಯೋಗ ಮತ್ತು ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಡಿಸೆಂಬರ್ 31ರಂದು ಸ್ವಿಗ್ಗಿ, ಜೊಮ್ಯಾಟೋ, ಜಿಪ್ಟೊ, ಫ್ಲಿಪ್ ​ಕಾರ್ಟ್, ಬ್ಲಿಂಕಿಟ್ ಸೇರಿ ಆನ್​ಲೈನ್​ ಆ್ಯಪ್​ಗಳ ಗಿಗ್​ ಕಾರ್ಮಿಕರ ಹಿನ್ನೆಲೆಯಲ್ಲಿ ಕೇಂದ್ರ ಕಾರ್ಮಿಕ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ 10 ನಿಮಿಷದಲ್ಲಿ ಡೆಲಿವರಿ ವ್ಯವಸ್ಥೆ ಕೈಬಿಟ್ಟಿದೆ.

ಡೆಲಿವರಿ ಬಾಯ್ ಗಳ ಸುರಕ್ಷತೆ ದೃಷ್ಟಿಯಿಂದ 10 ನಿಮಿಷಗಳಲ್ಲಿ ಡೆಲಿವರಿ ಶಪಥ ಮಾಡಬೇಡಿ. ಈ ವ್ಯವಸ್ಥೆಯನ್ನು ಕೈ ಬಿಡಿ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಆನ್ ಲೈನ್ ಶಾಪಿಂಗ್ ಕಂಪನಿಗಳಿಗೆ ಸೂಚಿಸಿದ್ದರು.

ಬ್ಲಿಂಕಿಟ್ ಸಂಸ್ಥೆ 10,000ಕ್ಕೂ ಅಧಿಕ ಡೆಲಿವರಿಗಳನ್ನು 10 ನಿಮಿಷದಲ್ಲಿ ಮಾಡಲಾಗಿದೆ. 30 ಸಾವಿರಕ್ಕೂ ಅಧಿಕ ಡೆಲಿವರಿಗಳನ್ನು 10 ನಿಮಿಷದಲ್ಲಿ ತಲುಪಿಸಲಾಗುವುದು ಎಂದು ಹೇಳಿಕೊಂಡಿತ್ತು.

10 ನಿಮಿಷದಲ್ಲಿ ಡೆಲಿವರಿ ಮಾಡ್ತೀವಿ ಎಂಬ ಕಂಪನಿಗಳ ಹೇಳಿಕೆಗಳು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇಂತಹ ನಿಯಮಗಳು ಜಾರಿಗೆ ಬಂದರೆ ಡೆಲಿವರಿ ಬಾಯ್ ಗಳ ಜೀವಕ್ಕೆ ಅಪಾಯ, ಸಂಚಾರ ನಿಯಮ ಉಲ್ಲಂಘನೆಗಳು ಹೆಚ್ಚಾಗಲಿವೆ ಎಂದು ಆರೋಪಗಳು ಕೇಳಿಬಂದಿದ್ದವು.

ಡೆಲಿವರಿ ಬಾಯ್ ಗಳ ಮುಷ್ಕರದ ಹಿನ್ನೆಲೆಯಲ್ಲಿ ಕೆಲವು ಬದಲಾವಣೆ ಮಾಡಲು ಕಂಪನಿಗಳು ಒಪ್ಪಿಕೊಂಡಿತ್ತು. ಇನ್ನು ಕಾರ್ಮಿಕರು 10 ನಿಮಿಷಗಳ ವಿತರಣಾ ಆಯ್ಕೆಯನ್ನು ತೆಗೆಯುವಂತೆ ಬೇಡಿಕೆಯನ್ನು ಇಟ್ಟಿದ್ದರು. ಹತ್ತು ನಿಮಿಷಗಳ ವಿತರಣಾ ಮಾದರಿಯಿಂದಾಗಿ ಸವಾರರು ತೀವ್ರ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಅವರ ಸುರಕ್ಷತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಾರ್ವಜನಿಕರಿಂದ ಈ ಬಗ್ಗೆ ಚರ್ಚೆ ನಡೆದಿತ್ತು.

ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ಮಧ್ಯ ಪ್ರವೇಶಿಸಿದ್ದು, ನಂತರ ಬ್ಲಿಂಕಿಟ್ ಎಲ್ಲಾ ಬ್ರ್ಯಾಂಡ್ ಪ್ಲ್ಯಾಟ್​ಫಾರಂಗಳಿಂದ ತನ್ನ 10 ನಿಮಿಷಗಳ ಡೆಲಿವರಿ ವ್ಯವಸ್ಥೆಯನ್ನು ತೆಗೆದುಹಾಕಿದೆ. ಮಾಂಡವಿಯಾ ಅವರು ಬ್ಲಿಂಕಿಟ್, ಜೆಪ್ಟೊ, ಸ್ವಿಗ್ಗಿ ಮತ್ತು ಜೊಮಾಟೊ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ, ಕಾರ್ಮಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕಟ್ಟುನಿಟ್ಟಾದ ವಿತರಣಾ ಸಮಯದ ಮಿತಿಗಳನ್ನು ತೆಗೆದುಹಾಕುವಂತೆ ಕಂಪನಿಗಳಿಗೆ ಸಲಹೆ ನೀಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment