Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ದೇಶ

ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಜಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 3 ವೀಕ್ಷಣೆಗಳು
shrikant-pangarkar

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ.

2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ಹತ್ಯೆ ನಡೆದಿತ್ತು. ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯಾಗಿ ಉಲ್ಲೇಖಿಸಲಾಗಿದೆ.

ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನಿನ ಮೇಲೆ ಹೊರಗೆ ಬಂದಿರುವ ಶ್ರೀಕಾಂತ್ ಪಂಗಾರ್ಕರ್ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 13 ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಶ್ರೀಕಾಂತ್ ಪಂಗಾರ್ಕರ್ ಜಾಮೀನಿನ ಮೇಲೆ ಬಿಡುಗಡೆ ಆಗುತ್ತಿದ್ದಂತೆ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖಂಡರು ಸನ್ಮಾನ ಮಾಡಿದ್ದರು. ಆದರೆ ಈ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು.

ಶ್ರೀಕಾಂತ್ ಪಂಗಾರ್ಕರ್ ಡಾನ್ಸ್‌ ಮಾಡುತ್ತ, ಡ್ರಮ್ಸ್ ಬಾರಿಸುತ್ತ ಪುಷ್ಪಗಳನ್ನು ಎಸೆಯುತ್ತ ಬೆಂಬಲಿಗರೊಂದಿಗೆ ಗೆಲುವನ್ನು ಸಂಭ್ರಮಿಸಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಈ ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಇದು ಶ್ರೀಕಾಂತ್ ಗೆಲುವಿಗೆ ಪರೋಕ್ಷವಾಗಿ ನೆರವಾಗಿತ್ತು.

ಬಿಎಂಸಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಏಕನಾಥ ಶಿಂಧೆ ನೇತೃತ್ವದ ಮಹಾಯುತಿ ಬಹುಮತ ದಾಟಿ ಅತ್ಯಧಿಕ ಸ್ಥಾನಗಳನ್ನು ಗೆದ್ದುಕೊಂಡಿದೆ.

ಪಂಗಾರ್ಕರ್ 2001 ಮತ್ತು 2006 ರ ನಡುವೆ ಶಿವಸೇನೆಯಿಂದ ಜಲ್ನಾ ಪುರಸಭೆಯ ಸದಸ್ಯರಾಗಿದ್ದರು. 2011 ರಲ್ಲಿ ಶಿವಸೇನೆ ಟಿಕೆಟ್ ನಿರಾಕರಿಸಿದ ನಂತರ ಹಿಂದೂ ಜನಜಾಗೃತಿ ಸಮಿತಿಯನ್ನು ಸೇರಿದ್ದರು.

ರಾಜ್ಯದ ಭಾಗಗಳಿಂದ ಕಚ್ಚಾ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಅವರನ್ನು ಆಗಸ್ಟ್ 2018 ರಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment