Thursday, July 2, 2026
Google search engine
Homeರಾಜಕೀಯಮುಂಬೈ ಫಲಿತಾಂಶ ಬೆನ್ನಲ್ಲೇ ಉಲ್ಟಾ ಹೊಡೆದ ಜೆಡಿಎಸ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ...

ಮುಂಬೈ ಫಲಿತಾಂಶ ಬೆನ್ನಲ್ಲೇ ಉಲ್ಟಾ ಹೊಡೆದ ಜೆಡಿಎಸ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಸುಳಿವು!

ಬೆಂಗಳೂರು: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ಜೆಡಿಎಸ್ ರಾಗ ಬದಲಾಯಿಸಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಸುಳಿವು ನೀಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯಲ್ಲಿ ಕೇಂದ್ರ ಸಚಿವ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ. ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ಮುಕ್ತವಾಗಿದ್ದು, ಈ ಬಗ್ಗೆ ಗೊಂದಲದ ಹೇಳಿಕೆ ನೀಡಿದಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ. ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ. ನಾವು ಸ್ಥಳೀಯ ಸಂಸ್ಥೆ ಚುನಾವಣೆಯ ಮೈತ್ರಿ ಕುರಿತು ಅಮಿತ್ ಶಾ ಜೊತೆ ಮಾತುಕತೆ ನಡೆಸಲು ಸಾಧ್ಯವೇ ಎಂದು ಇತ್ತೀಚೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿಕೆ ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ವಿಷಯದಲ್ಲಿ ನಾವು ಮುಕ್ತವಾಗಿದ್ದೇವೆ. ನಮ್ಮಿಂದ ಮೈತ್ರಿ ಗೊಂದಲಕ್ಕೆ ಎಡೆ ಮಾಡಿಕೊಡಬಾರದು ಎಂಬುದು ನಮ್ಮ ಅಭಿಪ್ರಾಯ. ಮುಂದಿನ ದಿನಗಳಲ್ಲಿ ಯಾವ ರೀತಿ ರಾಜಕೀಯ ಬೆಳವಣಿಗೆ, ಸ್ಥಳೀಯವಾಗಿ ಬಿಜೆಪಿ ನಾಯಕರ ತೀರ್ಮಾನ ಏನಿದೆ? ಇದೆಲ್ಲವನ್ನು ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದಿದ್ದಾರೆ.

ನಮ್ಮ ಉದ್ದೇಶ, ನಮ್ಮ ಪಕ್ಷದ ಉದ್ದೇಶ ಕಾಂಗ್ರೆಸ್‌ನ ದುರಾಡಳಿತ ರಾಜ್ಯದಿಂದ ಹೋಗಬೇಕು. ಅದಕ್ಕೆ ನಾವು ತಯಾರಿದ್ದೇವೆ. ಮೈತ್ರಿ ವಿಷಯದಲ್ಲಿ ಮುಕ್ತವಾದ ಅವಕಾಶ ಇಟ್ಟುಕೊಂಡಿದ್ದೇವೆ. ಆ ಸಮಯಕ್ಕೆ ಏನಾಗಬೇಕು. ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲು, ಬೆಂಗಳೂರಿನಲ್ಲಿ ಅನೇಕ ವರ್ಷಗಳಿಂದ ಅಭಿವೃದ್ಧಿ ಸ್ಥಗಿತವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಬರೀ ಲೂಟಿ ಆಗ್ತಿದೆ. ಕಸ ವಿಲೇವಾರಿ, ಗುಂಡು ಮುಚ್ಚುವುದು, ಯಾವ ಯಾವ ರೀತಿ ಪಕ್ಷಗಳ ನಡವಳಿಕೆ, ಪಕ್ಷದ ಕೊಡುಗೆ ಏನು ಅಂತ ಇಟ್ಟುಕೊಂಡು ಜನರ ಬಳಿ ಹೋಗಬೇಕು. ಮುಂದೆ ಏನು ಬದಲಾವಣೆ ಆಗುತ್ತೋ ನೋಡೋಣ ಎಂದರು.

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಕೂಟ ಗೆಲುವು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆಯೇ ಎಕ್ಸಿಟ್ ಪೋಲ್‌ನಲ್ಲಿ ಮುಂಬೈನಲ್ಲಿ ಬಿಜೆಪಿ ಬರುತ್ತೆ ಅಂತ ಮಾಧ್ಯಮಗಳೇ ಹೇಳಿದ್ದವು. ಅದರಂತೆ ಮುಂಬೈನಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಪ್ರಥಮವಾಗಿ ಅಧಿಕಾರಕ್ಕೆ ಬಂದಿದೆ. ಈ ಗೆಲುವಿಗೆ ಪ್ರಧಾನಿ ಮೋದಿ, ಮಹಾರಾಷ್ಟ್ರ ಸಿಎಂಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಫಲಿತಾಂಶ ಪಂಚ ರಾಜ್ಯ ಚುನಾವಣೆ ಮೇಲೆ ಇಂಪ್ಯಾಕ್ಟ್ ಆಗುತ್ತಾ ಎಂಬ ಪ್ರಶ್ನೆಗೆ ಮಹಾರಾಷ್ಟ್ರ ಚುನಾವಣೆ ಬೇರೆ. ಬೇರೆ ರಾಜ್ಯದಲ್ಲಿ ನಡೆಯೋ ಚುನಾವಣೆ ಬೇರೆ. ತಮಿಳುನಾಡು, ಪಶ್ಚಿಮ ಬಂಗಾಳ ಬೇರೆ ಬೇರೆ ಚುನಾವಣೆ ಬೇರೆ ರೀತಿ ನಡೆಯುತ್ತದೆ. ಅಮಿತ್ ಶಾ, ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಬೇಕು ಅಂತ ಸಂಘಟನೆಯಲ್ಲಿ ಬಹಳ ಮುಂದೆ ಇದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments