ತುಮಕೂರು: ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಅಣತಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿರುವ ಶ್ರೀ ಹೇಮಗಿರಿ ವರದರಾಜ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ವೇಳೆ ಕಾಲು ಜಾರಿ ದೇವಾಲಯದ ಬಳಿ ಇರುವ ಕಲ್ಯಾಣಿಗೆ ಬಿದ್ದು ಸಂಸೃತ ಶಿಕ್ಷಕ ಸಾವನ್ನಪ್ಪಿರು ಘಟನೆ ಶನಿವಾರ ತಡರಾತ್ರಿ ನಡೆದಿದೆ.
ತಾಲ್ಲೂಕಿನ ಹುಲಿಯೂರುದುರ್ಗ ವ್ಯಾಪ್ತಿಯ ಚಿಕ್ಕೋನಹಳ್ಳಿ ಗ್ರಾಮದ ಅಭಿನಂದನ್ (36) ಮೃತ ವ್ಯಕ್ತಿ.
ಶನಿವಾರ ದಾವಣಗೆರೆಯಿಂದ ಮನೆ ದೇವರಾದ ಶ್ರೀ ಹೇಮಗಿರಿ ವರದರಾಜ ಸ್ವಾಮಿಯ ಜಾತ್ರಾ ಮಹೋತ್ಸವಕ್ಕೆ ಬಂದಿದ್ದ ಅಭಿನಂದನ್ ದೇವರ ದರ್ಶನ ಪಡೆದು ರಥೋತ್ಸವದಲ್ಲಿ ಭಾಗಿಯಾಗಿದ್ದ ಬಳಿಕ ಕಲ್ಯಾಣಿ ಬಳಿ ಹೊಗುತ್ತಿದ್ದ ವೇಳೆ ಕಾಲುಜಾರಿ ನೀರಿಗೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಪ್ರಸ್ತುತ ದಾವಣಗೆರೆ ಜಿಲ್ಲೆಯಲ್ಲಿ ಸಂಸೃತ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಚರಣೆ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ ಸ್ಥಳಕ್ಕೆ ಅಮೃತೂರು ವೃತ್ತ ನಿರೀಕ್ಷಕ ನವೀನ್‌ಗೌಡ ಪಿಎಸ್ಐ ಪ್ರಶಾಂತ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ



